SUDDIKSHANA KANNADA NEWS/ DAVANAGERE/ DATE:16-12-2024
ಬೆಳಗಾವಿ: ಅನ್ವರ್ ಮನಪ್ಪಾಡಿ 150 ಕೋಟಿ ರೂಪಾಯಿ ಆಮೀಷ ಕೇಸ್ ಸಿಬಿಐ ತನಿಖೆಗೆ ಒಪ್ಪಿಸುವ ಇರಾದೆ ರಾಜ್ಯ ಸರ್ಕಾರಕ್ಕೆ ಇಲ್ಲ. ಸಿಬಿಐನವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದರೆ ನಾವು ನೀಡಬೇಕೋ ಬೇಡವೋ ಎಂಬ ಕುರಿತಂತೆ ಆಲೋಚನೆ ಮಾಡುತ್ತೇವೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ತಿಳಿಸಿದರು.
ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಪ್ರಕರಣದ ಎಲ್ಲಾ ವಿಚಾರ ನಮ್ಮ ಕಣ್ಮುಂದೆ ಇದೆ. ಸಿಬಿಐನವರು ಈ ಪ್ರಕರಣದ ತನಿಖೆ ಮಾಡುವುದಾಗಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಿ. ನಂತರ ನಾವು ಆಲೋಚನೆ ಮಾಡುತ್ತೇವೆ. ನಾವಾಗಿ ಸಿಬಿಐ ತನಿಖೆಗೆ ನೀಡುವುದಿಲ್ಲ ಎಂದು ಬಿಜೆಪಿ ಅವರಿಗೆ ಗೊತ್ತಿದೆ. ಹೀಗಾಗಿ ಅವರು ಸಿಬಿಐ ತನಿಖೆಗೆ ಕೇಳುತ್ತಿದ್ದಾರೆ ಎಂದು ಹೇಳಿದರು.
ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರು ರಾಜಕೀಯ ಕಾರಣಗಳಿಂದಾಗಿ ಯೂಟರ್ನ್ ಹೊಡೆದಿದ್ದಾರೆ. ಮಾಜಿ ಅಧ್ಯಕ್ಷರ ಹೇಳಿಕೆ ವಿಡಿಯೋಗಳನ್ನು ನಾನು ಮಾಧ್ಯಮ ಹಾಗೂ
ಸಾಮಾಜಿಕ ಜಾಲತಾಣಗಳಲ್ಲಿ ನೋಡಿದ್ದೇನೆ. ಅನೇಕ ವಿಚಾರಗಳು ಅವರ ಬಾಯಲ್ಲೇ ಬಂದಿವೆ. ತಮ್ಮ ವಿಚಾರವನ್ನು ಪ್ರಧಾನಮಂತ್ರಿ ಹಾಗೂ ಗೃಹಮಂತ್ರಿಗಳಿಗೆ ಪತ್ರ ಬರೆದು ತಿಳಿಸಿರುವುದಾಗಿ ಹೇಳಿದ್ದರು. ಅವರು
ಹೇಳಿರುವ ವಿಚಾರಗಳನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದ್ದಾರೆ. ಈ ದಾಖಲೆಗಳು ಎಲ್ಲೂ ಹೋಗಲು ಸಾಧ್ಯವಿಲ್ಲ. ನಾವು ದಾಖಲೆ ಬಿಡುಗಡೆ ಮಾಡುವ ಮುನ್ನ ಅವರೇ ಈ ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಹೇಳಿದರು.
ನಾವೇನೂ ಗೊಂದಲ ಹೇಳಿಕೆ ನೀಡುತ್ತಿಲ್ಲ. ಬಿಜೆಪಿಯವರೇ ಗೊಂದಲಮಯ ಹೇಳಿಕೆ ನೀಡುತ್ತಿದ್ದಾರೆ. ಅವರ ಹೇಳಿರುವ ಮಾತನ್ನು ನೀವು ಪ್ರಕಟಿಸಿದ್ದೀರಿ. ಈ ವಿಚಾರವನ್ಮು ಸಿಎಂ ಟ್ವೀಟ್ ಮಾಡಿದ್ದಾರೆ. ಈ ವಿಚಾರ
ಮುಚ್ಚಿಕೊಳ್ಳಲು ಅವರಿಂದ ವಿಭಿನ್ನ ಹೇಳಿಕೆ ಕೊಡಿಸಲಾಗಿದೆ. ಅವರು ಹೇಳಿಕೆ ನೀಡಿರುವುದು ಸತ್ಯ. ಬೇಕಾದರೆ ಅವರ ಧ್ವನಿ ನೀವೇ ಪರಿಶೀಲಿಸಿ” ಎಂದು ತಿಳಿಸಿದರು.