Home ದಾವಣಗೆರೆ ದಾವಣಗೆರೆ ಜಿಲ್ಲೆಯ ಮತದಾರರೇ ಗಮನಿಸಿ: ಜುಲೈ 29 ರೊಳಗೆ ಈ ಫಾರ್ಮ್ ತುಂಬದಿದ್ದರೆ ಲಿಸ್ಟ್‌ನಿಂದ ಹೆಸರು ಡಿಲೀಟ್!
ದಾವಣಗೆರೆನವದೆಹಲಿಬೆಂಗಳೂರು

ದಾವಣಗೆರೆ ಜಿಲ್ಲೆಯ ಮತದಾರರೇ ಗಮನಿಸಿ: ಜುಲೈ 29 ರೊಳಗೆ ಈ ಫಾರ್ಮ್ ತುಂಬದಿದ್ದರೆ ಲಿಸ್ಟ್‌ನಿಂದ ಹೆಸರು ಡಿಲೀಟ್!

Share
ದಾವಣಗೆರೆ
Share

ದಾವಣಗೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಾದ್ಯಂತ ‘ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಎಸ್.ಐ.ಆರ್. ಪ್ರಕ್ರಿಯೆ ಅತ್ಯಂತ ಚುರುಕಿನಿಂದ ಸಾಗುತ್ತಿದೆ. ಜಿಲ್ಲೆಯ ಒಟ್ಟು 7 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜೂನ್ 30 ರಿಂದಲೇ ಬೂತ್ ಮಟ್ಟದ ಅಧಿಕಾರಿಗಳು ಎನುಮೆರೇಷನ್ ನಮೂನೆಗಳೊಂದಿಗೆ ಮತದಾರರ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಜೂನ್ 16ರ ವರೆಗಿನ ಅಂಕಿ-ಅಂಶಗಳಂತೆ ಜಿಲ್ಲೆಯಲ್ಲಿ ಒಟ್ಟು 14,99,282 ಮತದಾರರಿದ್ದಾರೆ. ಮತದಾರರ ನಿಖರ ಮಾಹಿತಿ ಪಡೆಯಲು ಈಗಾಗಲೇ 8,99,435 ಎನುಮೆರೇಷನ್ ನಮೂನೆಗಳನ್ನು ಬಿಎಲ್‍ಒಗಳ ಮೂಲಕ ಸಾರ್ವಜನಿಕರಿಗೆ ವಿತರಿಸಲಾಗಿದ್ದು, ಈ ಪೈಕಿ 38,003 ನಮೂನೆಗಳ ಗಣಕೀಕರಣ ಪ್ರಕ್ರಿಯೆಯೂ ಪೂರ್ಣಗೊಂಡಿದೆ.

ಕ್ಷೇತ್ರವಾರು ಮಾಹಿತಿ ಮತ್ತು ಪ್ರಗತಿ ವಿವರ: ಜಗಳೂರು: 2,00,836 ಒಟ್ಟು ಮತದಾರರಿದ್ದು, 1,27,608 ನಮೂನೆಗಳನ್ನು ವಿತರಿಸಲಾಗಿದೆ. ಹರಿಹರ: 2,11,023 ಮತದಾರರಿದ್ದು, 1,55,143 ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ. ದಾವಣಗೆರೆ ಉತ್ತರ: 2,58,718 ಮತದಾರರ ಪೈಕಿ 69,881 ನಮೂನೆಗಳನ್ನು ವಿತರಿಸಲಾಗಿದೆ. ದಾವಣಗೆರೆ ದಕ್ಷಿಣ: 2,27,996 ಮತದಾರರಿದ್ದು, 79,365 ನಮೂನೆಗಳನ್ನು ಹಂಚಲಾಗಿದೆ.

ಮಾಯಕೊಂಡ: 1,97,048 ಮತದಾರರಿದ್ದು, 1,66,618 ನಮೂನೆ ವಿತರಣೆಯಾಗಿದೆ.

ಚನ್ನಗಿರಿ: 2,03,628 ಮತದಾರರ ಪೈಕಿ 1,64,380 ನಮೂನೆಗಳನ್ನು ತಲುಪಿಸಲಾಗಿದೆ. ಹೊನ್ನಾಳಿ: 2,00,033 ಒಟ್ಟು ಮತದಾರರಿದ್ದು, 1,36,440 ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ.

ಸ್ಥಳಾಂತರ, ವಲಸೆ ಹಾಗೂ ಮರಣ ಪ್ರಕರಣಗಳ ಪತ್ತೆ:

ಮನೆ ಮನೆ ಭೇಟಿಯ ಸಂದರ್ಭದಲ್ಲಿ ಬಿಎಲ್‍ಒಗಳು ಮತದಾರರ ವಿವರಗಳನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ. ಜುಲೈ 1ರ ವರೆಗಿನ ವರದಿಯ ಪ್ರಕಾರ, ಜಿಲ್ಲಾದ್ಯಂತ ಒಟ್ಟು 421 ವಿಶೇಷ ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ 188 ಮರಣ ಹೊಂದಿದ ಪ್ರಕರಣಗಳು, 153 ಶಾಶ್ವತವಾಗಿ ವಲಸೆ ಹೋದವರು, 71 ದ್ವಿಪ್ರತಿ (ಆuಠಿಟiಛಿಚಿಣe) ಮತದಾರರು ಹಾಗೂ 5 ಅಪೂರ್ಣ ಮಾಹಿತಿ ಇರುವ ಪ್ರಕರಣಗಳು ಸೇರಿವೆ. ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ಗರಿಷ್ಠ 110 ಹಾಗೂ ಮಾಯಕೊಂಡದಲ್ಲಿ 93 ಇಂತಹ ಪ್ರಕರಣಗಳು ಪತ್ತೆಯಾಗಿವೆ. ಈ ಮನೆ ಮನೆ ಭೇಟಿ ಹಾಗೂ ನಮೂನೆಗಳ ಸಂಗ್ರಹಣೆ ಮತ್ತು ಗಣಕೀಕರಣ ಪ್ರಕ್ರಿಯೆಯು ಜುಲೈ 29, 2026 ರವರೆಗೆ ಮುಂದುವರಿಯಲಿದ್ದು, ಸಾರ್ವಜನಿಕರು ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿ ಸಹಕರಿಸಬೇಕೆಂದು ಜಿಲ್ಲಾಡಳಿತ ಕೋರಿದೆ.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಜುಲೈ 29 ರೊಳಗೆ ಅರ್ಜಿ ಸಲ್ಲಿಸಿ:

ಜಿಲ್ಲೆಯಲ್ಲಿ ಎಸ್.ಐ.ಆರ್. (Special Intensive Revision) ಅಂದರೆ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮವು ಈಗಾಗಲೇ ಯಶಸ್ವಿಯಾಗಿ ಆರಂಭಗೊಂಡಿದ್ದು, ಇದರ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬೃಹತ್ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್‌ ಅವರು ತಿಳಿಸಿದರು.

ಅವರು ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಅಂಗವಾಗಿ ಬೂದಾಳು ರಸ್ತೆಯ ಎಸ್ ಸಿ/ಎಸ್ಟಿ ಹಾಸ್ಟೆಲ್ ನಿಂದ ಹೊಂಡದ ಸರ್ಕಲ್‌ ರವರೆಗೆ ಏರ್ಪಡಿಸಿದ್ದ ಜಾಥಾ ಕಾರ್ಯಕ್ರಮವನ್ನು ಉದ್ಪಾಟಿಸಿ ಮಾತನಾಡಿದರು.

ವಿಶೇಷ ಪರಿಷ್ಕರಣೆ ಪ್ರಕ್ರಿಯೆಯು ಜೂನ್ 30 ರಿಂದ ಜುಲೈ 29 ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಬಿ.ಎಲ್.ಒ (BLO) ಗಳ ಮುಖಾಂತರ ಮನೆ ಮನೆಗೆ ಇನ್ಯೂಮರೇಷನ್ (Enummeration) ಫಾರ್ಮ್‌ಗಳನ್ನು ವಿತರಿಸಲಾಗುತ್ತಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ಈ ಫಾರ್ಮ್ ಅನ್ನು ಕಡ್ಡಾಯವಾಗಿ ತುಂಬಿ ನೀಡಬೇಕಾಗಿದೆ. ಇದನ್ನು ನೀಡದಿದ್ದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗುವುದಿಲ್ಲ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ಶೇ. 97 ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದ್ದು, ಶೇ. 54 ರಷ್ಟು ಇನ್ಯೂಮರೇಷನ್ ಫಾರ್ಮ್‌ಗಳನ್ನು ಈಗಾಗಲೇ ವಿತರಿಸಲಾಗಿದೆ. ಸಾರ್ವಜನಿಕರು ಭರ್ತಿ ಮಾಡಿ ನೀಡುವ ಫಾರ್ಮ್‌ಗಳನ್ನು ಡಿಜಿಟಲೈಸ್ ಮಾಡಿ, ‘ECINET’ ಆ್ಯಪ್ ಮೂಲಕ ಅಪ್‌ಲೋಡ್ ಮಾಡಲಾಗುತ್ತದೆ. ಆ ಬಳಿಕ ಮತದಾರರು ತಮ್ಮ ಹೆಸರನ್ನು ಖಚಿತ ಪಡಿಸಿಕೊಳ್ಳಬಹುದು ಎಂದರು.

ಬೆಂಗಳೂರು ಅಥವಾ ಇತರೆಡೆ ಉದ್ಯೋಗದ ನಿಮಿತ್ತ ಹೊರಗಿರುವವರ ಪರವಾಗಿ, ಅವರ ಮನೆಯಲ್ಲಿರುವ 18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರು ಸಹಿ ಮಾಡಿ ಬಿ.ಎಲ್.ಒ ಗಳಿಗೆ ಫಾರ್ಮ್ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

ಮತದಾರರ ಅನುಕೂಲಕ್ಕಾಗಿ ನಗರ ಪ್ರದೇಶದಲ್ಲಿ 60 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 194 ‘ವೋಟರ್ ಫೆಸಿಲಿಟೇಶನ್ ಸೆಂಟರ್’ (ಮತದಾರರ ಸಹಾಯ ಕೇಂದ್ರ) ಗಳನ್ನು ತೆರೆಯಲಾಗಿದೆ. ಯಾವುದೇ ಗೊಂದಲಗಳಿದ್ದಲ್ಲಿ ಸಾರ್ವಜನಿಕರು ನೇರವಾಗಿ ಗ್ರಾಮ ಪಂಚಾಯಿತಿ ಅಥವಾ ಆಯಾ ವಾರ್ಡ್‌ಗಳಲ್ಲಿರುವ ಸಹಾಯ ಕೇಂದ್ರಗಳನ್ನು ಸಂಪರ್ಕಿಸಬಹುದು.

ಫಾರ್ಮ್ ಜೊತೆಗೆ ಯಾವುದೇ ದಾಖಲೆಗಳ ಅಗತ್ಯವಿರುವುದಿಲ್ಲ, ಆದರೆ ತಿದ್ದುಪಡಿ ಅಥವಾ ಸಮಸ್ಯೆಗಳಿದ್ದಲ್ಲಿ ಮಾತ್ರ 11 ಅಧಿಕೃತ ದಾಖಲೆಗಳಲ್ಲಿ ಒಂದನ್ನು ಬಳಸಬಹುದು ಎಂದು ಸ್ಪಷ್ಟಪಡಿಸಲಾಗಿದೆ. ಜುಲೈ 29 ರ ಕೊನೆಯ ದಿನಾಂಕದೊಳಗಾಗಿ ಸಾರ್ವಜನಿಕರು ಜವಾಬ್ದಾರಿಯಿಂದ ತಮ್ಮ ಫಾರ್ಮ್‌ಗಳನ್ನು ಬಿ.ಎ.ಲ್.ಒ ಗಳಿಗೇ ನೇರವಾಗಿ ತಲುಪಿಸಬೇಕು ಎಂದು ತಿಳಿಸಿದರು.

ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್‌, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕ, ಹಿರಿಯ ನಾಗರೀಕರ ಮತ್ತು ವಿಕಲಚೇತನರ ಅಧಿಕಾರಿ ರಶ್ಮಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಸಿದ್ದಲಿಂಗೇಶ್‌, ಜಿಲ್ಲಾ ಆಯುಷ್‌ ಅಧಿಕಾರಿ ಡಾ.ಯೊಗೇಂದ್ರ ಕುಮಾರ್‌, ಸಹಾಯಕ ಕೃಷಿ ನಿರ್ದೇಶಕ ಶ್ರೀಧರ ಮೂರ್ತಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್‌ ಮಠದ್‌ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾಲೇಜು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles