ದಾವಣಗೆರೆ: ಪ್ರೀತಿಸಿ ಮದುವೆಯಾಗಿದ್ದ ಯುವಕನಿಗೆ ಪೊಲೀಸ್ ಠಾಣೆಯ ಆವರಣದಲ್ಲೇ ಯುವತಿಯ ಮಾವ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬಸವಾಪಟ್ಟಣದಲ್ಲಿ ನಡೆದಿದೆ.
ಕಂಚಗಾರನಹಳ್ಳಿ ಗ್ರಾಮದ ಸಿದ್ದೇಶ್ (22) ಚಾಕು ಇರಿತಕ್ಕೊಳಗಾದ ದುರ್ದೈವಿ. ಈತ ದಾಗಿನಕಟ್ಟೆ ಗ್ರಾಮದ ಲೀಲಾವತಿ (18) ಎಂಬಾಕೆಯನ್ನು ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಇತ್ತೀಚೆಗಷ್ಟೇ ಇಬ್ಬರೂ ಪರಸ್ಪರ ವಿವಾಹವಾಗಿದ್ದರು.
ಠಾಣೆಯಲ್ಲೇ ನಡೆಯಿತು ದಾಳಿ!
ಪ್ರೇಮಿಗಳ ಮದುವೆಯಿಂದ ಯುವತಿಯ ಕುಟುಂಬಸ್ಥರು ತೀವ್ರ ಆಕ್ರೋಶಗೊಂಡಿದ್ದರು. ತಮಗೆ ಜೀವ ಬೆದರಿಕೆ ಇದೆ ಎಂದು ನವವಿವಾಹಿತ ಜೋಡಿ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ (SP) ದೂರು ನೀಡಿದ್ದರು. ಎಸ್‌ಪಿ ಸೂಚನೆ ಮೇರೆಗೆ ದೂರು ದಾಖಲಿಸಲು ಜೋಡಿಯು ಇಂದು ಬಸವಾಪಟ್ಟಣ ಪೊಲೀಸ್ ಠಾಣೆಗೆ ಆಗಮಿಸಿತ್ತು.
ಈ ವೇಳೆ ಠಾಣೆಯ ಆವರಣದಲ್ಲೇ ಹೊಂಚು ಹಾಕಿ ಕುಳಿತಿದ್ದ ಯುವತಿಯ ಮಾವ ನಾಗರಾಜ್ ಹಾಗೂ ಇತರರು ಸಿದ್ದೇಶ್ ಮೇಲೆ ಚಾಕುವಿನಿಂದ ಭೀಕರವಾಗಿ ದಾಳಿ ನಡೆಸಿದ್ದಾರೆ. ದಾಳಿಯಿಂದಾಗಿ ಯುವಕನ ಕೈಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಪೊಲೀಸರು ಹಾಗೂ ಸ್ಥಳೀಯರು ಆತನನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದಾಳಿ ನಡೆಸಿದ ಮುಖ್ಯ ಆರೋಪಿ ನಾಗರಾಜ್‌ನನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.
- Basavapatna Police Station Attack
- Basavapatna police station knife attack
- Channagiri Crime Updates
- Davanagere crime news
- honor killing attempt Davanagere
- Karnataka latest crime news
- love marriage attack Karnataka
- newlyweds attacked Davanagere
- Siddesh Basavapatna
- ಕರ್ನಾಟಕ ಕ್ರೈಮ್ ಅಪ್ಡೇಟ್ಸ್
- ಚನ್ನಗಿರಿ ಸುದ್ದಿ
- ದಾವಣಗೆರೆ ಕ್ರೈಮ್ ನ್ಯೂಸ್
- ದಾವಣಗೆರೆ ಚಾಕು ಇರಿತ ಪ್ರಕರಣ
- ಪ್ರೀತಿಸಿ ಮದುವೆಯಾದ ಯುವಕನಿಗೆ ಇರಿತ
- ಬಸವಾಪಟ್ಟಣ ಪೊಲೀಸ್ ಠಾಣೆ ಚಾಕು ದಾಳಿ
- ಸಿದ್ದೇಶ್ ಲೀಲಾವತಿ ಮದುವೆ





Leave a comment