ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Siddaramaiah: ಮರ್ಯಾದೆಗೇಡು ಹತ್ಯೆ ಮನ ಕಲಕಿದೆ, ತನಿಖೆ, ವಿಚಾರಣೆ ವೇಳೆ ಲೋಪವಾಗದಂತೆ ಎಚ್ಚರ: ಸಿಎಂ ಸಿದ್ದರಾಮಯ್ಯ

On: August 29, 2023 5:00 AM
Follow Us:
Siddaramaiah
---Advertisement---

SUDDIKSHANA KANNADA NEWS/ DAVANAGERE/ DATE:29-08-2023

ಬೆಂಗಳೂರು: ಕಳೆದ ಕೆಲ ವಾರಗಳಲ್ಲಿ ರಾಜ್ಯದ ಎರಡು ಕಡೆಗಳಲ್ಲಿ ಮರ್ಯಾದೆಗೇಡು ಹತ್ಯೆ ಪ್ರಕರಣಗಳು ನಡೆದಿರುವ ಸುದ್ದಿ ನಮ್ಮೆಲ್ಲರ ಮನ ಕಲಕಿದೆ. ನಮ್ಮ ಸಮಾಜದಲ್ಲಿ ಅಂತರ್ಗತವಾಗಿರುವ ಜಾತಿ ವ್ಯವಸ್ಥೆ, ಸಾಮಾಜಿಕ ಕಟ್ಟುಪಾಡುಗಳ ಹೀನ ಮನಸ್ಥಿತಿಯನ್ನು ಇಂತಹ ಘಟನೆಗಳು ಪ್ರತಿಫಲಿಸುತ್ತವೆ. ಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ನಮ್ಮ ಸರ್ಕಾರವು ಕಾನೂನಾತ್ಮಕವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.

ಮರ್ಯಾದೆಗೇಡು ಹತ್ಯೆ ಪ್ರಕರಣಗಳ ತನಿಖೆ, ವಿಚಾರಣೆಯಲ್ಲಿ ಯಾವುದೇ ಲೋಪವಾಗದಂತೆ ರಾಜ್ಯ ಸರ್ಕಾರ ಎಚ್ಚರವಹಿಸಲಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ: 

Siddaramaiah: ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ, ಸುಳ್ಳು ಸುದ್ದಿ ಹರಡಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಕೇಸ್ ದಾಖಲಿಸಿ ಜೈಲಿಗಟ್ಟಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಮರ್ಯಾದೆಗೇಡು ಹತ್ಯೆಗಳನ್ನು ಮಾಡುವಂತಹ ಮನಸ್ಥಿತಿಯನ್ನು ಸೃಷ್ಟಿಸಿರುವ ಜಾತಿಗ್ರಸ್ತ ಸಮಾಜದಲ್ಲಿ ಪರಿವರ್ತನೆ, ಜಾಗೃತಿಯನ್ನು ಮೂಡಿಸುವುದು ಅತ್ಯವಶ್ಯಕವಾಗಿದೆ. ಮನುಷ್ಯ ಚಂದ್ರನ ಮೇಲೆ ಕಾಲಿರಿಸಿದ್ದರೂ ದಲಿತರಿಗೆ ದೇವಸ್ಥಾನಗಳಲ್ಲಿ, ಮನೆಗಳಲ್ಲಿ ಕಾಲಿರಿಸಲು ಅವಕಾಶವನ್ನು ನೀಡದಂತಹ ಆಚರಣೆ, ಸಂಪ್ರದಾಯಗಳು ನಮ್ಮಲ್ಲಿವೆ. “ಜಾತಿ ಸಂರಚನೆಯ ಕಟ್ಟುಪಾಡುಗಳನ್ನು ಮೀರಲು ಮಾನವೀಯತೆ, ವಿಚಾರಪರತೆಯೇ ದಾರಿ; ಜಾಗೃತಿಯೇ ಅಸ್ತ್ರ” ಎಂದಿದ್ದಾರೆ.

ಸಮಾಜವನ್ನು ಜಾತಿ ಸಂಕೋಲೆಗಳಿಂದ ಬಿಡುಗಡೆಗೊಳಿಸಲು ಪ್ರಯತ್ನಿಸಿದ ಎಲ್ಲ ಸಮಾಜ ಸುಧಾರಕರ ಆಶಯಗಳನ್ನು ವ್ಯಾಪಕವಾಗಿ ಪ್ರಚುರಪಡಿಸುವುದು ಇಂದಿನ ಅಗತ್ಯವಾಗಿದೆ. ಈ ದಿಕ್ಕಿನಲ್ಲಿ ಸರ್ಕಾರವು ರಚನಾತ್ಮಕ ಕಾರ್ಯಕ್ರಮಗಳಿಗೆ ಮುಂದಾಗಲಿದೆ. ಎಂದು ತಿಳಿಸಿದ್ದಾರೆ.

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment