ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಗೆ ಆರೋಗ್ಯದ ಸಮಸ್ಯೆಯಿಂದ ಸರ್ಜರಿಗೆಂದು ಅಮೇರಿಕಾಗೆ ತೆರಳಿದ್ದಾರೆ. ನುರಿತ ವೈದ್ಯರ ನೇತೃತ್ವದಲ್ಲಿ ಶಿವಣ್ಣನಿಗೆ ಶಸ್ತ್ರಚಿಕಿತ್ಸೆ ನಡೆಸಿದರು ಎನ್ನುವ ಮಾಹಿತಿ ಹೊರ ಬಂದಿದೆ.
ಆಪರೇಷನ್ ಗೆ ಕೆಲದಿನಗಳ ಹಿಂದೆಯಷ್ಟೇ ಪತ್ನಿ ಗೀತಾ ಶಿವರಾಜ್ ಕುಮಾರ್ ಹಾಗೂ ಮಗಳಾದ ನಿವೇದಿತಾ ಶಿವರಾಜ್ ಕುಮಾರ್ ಅವರೊಂದಿಗೆ ಅಮೇರಿಕಾಗೆ ತೆರಳಿದ್ದರು.
ಅಮೇರಿಕಾದ ಕಾಲಮಾನ ಪ್ರಕಾರ ಬೆಳಗ್ಗೆ 8ಗಂಟೆಗೆ, ಭಾರತೀಯ ಕಾಲಮಾನ ಪ್ರಕಾರ ಸಂಜೆ 6ಗಂಟೆಗೆ ಅಪರೇಷನ್ ಥಿಯೇಟರ್ ಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗ್ತಿದೆ. ಅಮೇರಿಕಾದ ಫ್ಲೋರಿಡಾದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ಅಲ್ಲಿ ಶಿವಣ್ಣನಿಗೆ ಸರ್ಜರಿ ಮಾಡಲಾಗಿದೆ ಎನ್ನಲಾಗಿದ್ದು, ಸತತ 6ಗಂಟೆಗಳ ಕಾಲ ಸರ್ಜರಿ ನಡೆದಿದ್ದು, ಡಾ.ಮುರುಗೇಶ್ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನಡೆದಿದೆ. ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 11:30ರ ಸಮಯಕ್ಕೆ ಸರ್ಜರಿ ಪೂರ್ಣಗೊಂಡಿದೆ.
ಅಮೇರಿಕಾದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕರುನಾಡ ಚಕ್ರವರ್ತಿ ಡಾ.ಶಿವರಾಜ್ ಕುಮಾರ್ ಶೀಘ್ರವೇ ಗುಣಮುಖರಾಗಿ ಬರಲಿ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾರೈಸಿದ್ದಾರೆ. ಸಿಎಂ ತಮ್ಮ ಟ್ವಿಟರ್ ಪೇಜಿನಲ್ಲಿ ಶಿವಣ್ಣನೊಂದಿಗೆ ಇರುವ ಫೋಟೊವನ್ನು ಹಂಚಿಕೊಂಡಿದ್ದಾರೆ.ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ ಶೀಘ್ರವೇ ಗುಣಮುಖರಾಗಿ ಬನ್ನಿ ಎಂದು ಹಾರೈಸಿದ್ದೇನೆ ಎಂದರು.