Home ದಾವಣಗೆರೆ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚಿಲ್ಲರೆ ಆಟ ಬೇಡ: ಕೇಂದ್ರದ ವಿರುದ್ಧ ದಾವಣಗೆರೆಯಲ್ಲಿ ಗುಡುಗಿದ ಶಾಸಕ ಸಮರ್ಥ್ ಶಾಮನೂರು.
ದಾವಣಗೆರೆನವದೆಹಲಿಬೆಂಗಳೂರು

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚಿಲ್ಲರೆ ಆಟ ಬೇಡ: ಕೇಂದ್ರದ ವಿರುದ್ಧ ದಾವಣಗೆರೆಯಲ್ಲಿ ಗುಡುಗಿದ ಶಾಸಕ ಸಮರ್ಥ್ ಶಾಮನೂರು.

Share
ದಾವಣಗೆರೆ
Share

ದಾವಣಗೆರೆ: ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಎನ್.ಎಸ್.ಯು.ಐ., ಜಿಲ್ಲಾ ಕಾಂಗ್ರೆಸ್ ಸಂಘಟನೆಗಳು ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳೊಂದಿಗೆ ಶಾಸಕ ಸಮರ್ಥ್ ಶಾಮನೂರು ನಗರದ ಜೈದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಮರ್ಥ್ ಶಾಮನೂರು, ಪ್ರತಿಭಟನೆಯಲ್ಲಿ ರಾಷ್ಟ್ರೀಯ ಮಟ್ಟದ ನೀಟ್ (NEET) ಪರೀಕ್ಷೆಯನ್ನು ರದ್ದುಗೊಳಿಸಿ, ರಾಜ್ಯದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ಹಿಂದೆ ಯಶಸ್ವಿಯಾಗಿ ಜಾರಿಯಲ್ಲಿದ್ದ ಹಳೆಯ ಸಿಇಟಿ (CET) ಪರೀಕ್ಷಾ ಪದ್ಧತಿಯನ್ನು ಮರು ಜಾರಿಗೆ ತರಬೇಕೆಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.

ಪ್ರತಿಭಟನಾಕಾರರು ಮಾತನಾಡಿ, ನೀಟ್ ಪರೀಕ್ಷೆಯಿಂದ ಗ್ರಾಮೀಣ ಭಾಗದ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದು, ಸಮಾನ ಶಿಕ್ಷಣಾವಕಾಶಕ್ಕೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿದರು. ರಾಜ್ಯದ ಶಿಕ್ಷಣ ವ್ಯವಸ್ಥೆ, ಪಠ್ಯಕ್ರಮ ಹಾಗೂ ವಿದ್ಯಾರ್ಥಿಗಳ ಅಗತ್ಯಗಳಿಗೆ ಅನುಗುಣವಾಗಿ ಸಿಇಟಿ ಪರೀಕ್ಷಾ ಪದ್ಧತಿಯೇ ಹೆಚ್ಚು ಸೂಕ್ತವಾಗಿದ್ದು, ಅದನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ರಾಜ್ಯದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶೀಘ್ರವೇ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ, ಹಳೆಯ ಸಿಇಟಿ ಪರೀಕ್ಷಾ ಪದ್ಧತಿಯನ್ನು ಮರು ಜಾರಿಗೆ ತರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಎನ್.ಎಸ್.ಯು.ಐ. ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಮುಖಂಡರು, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿ, ವಿದ್ಯಾರ್ಥಿ ಪರ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Share

Leave a comment

Leave a Reply

Your email address will not be published. Required fields are marked *