Home ದಾವಣಗೆರೆ ದಾವಣಗೆರೆ ಜನತೆಗೆ ಅಲರ್ಟ್: ಜುಲೈ 16, 17 ರಂದು ನಗರದಲ್ಲಿ ನೀರು ಸರಬರಾಜು ಸ್ಥಗಿತ!
ದಾವಣಗೆರೆಬೆಂಗಳೂರು

ದಾವಣಗೆರೆ ಜನತೆಗೆ ಅಲರ್ಟ್: ಜುಲೈ 16, 17 ರಂದು ನಗರದಲ್ಲಿ ನೀರು ಸರಬರಾಜು ಸ್ಥಗಿತ!

Share
ದಾವಣಗೆರೆ
Share

ದಾವಣಗೆರೆ: ನಗರದ ನಿವಾಸಿಗಳಿಗೆ ಪ್ರಮುಖ ಸೂಚನೆಯೊಂದನ್ನು ಹೊರಡಿಸಲಾಗಿದೆ. ನಗರದಲ್ಲಿ ಹಮ್ಮಿಕೊಳ್ಳಲಾಗಿರುವ ಜಲಸಿರಿ ಯೋಜನೆಯ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 16 ಹಾಗೂ 17 ರಂದು ದಾವಣಗೆರೆ ನಗರಕ್ಕೆ ಸರಬರಾಜಾಗುವ ಕುಡಿಯುವ ನೀರಿನ ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಕೆಯುಐಡಿಎಫ್‍ಸಿ (KUIDFC) ಇಲಾಖೆಯ ವತಿಯಿಂದ ನಗರದಲ್ಲಿ ಮೂಲಸೌಕರ್ಯ ಬಲಪಡಿಸುವ ‘ಜಲಸಿರಿ’ ಯೋಜನೆಯನ್ನು ಪ್ರಗತಿಯಲ್ಲಿಡಲಾಗಿದೆ. ಇದರ ಭಾಗವಾಗಿ, 60 ಎಂ.ಎ.ಎಲ್.ಡಿ (MLD) ಸಾಮರ್ಥ್ಯದ ಬಾತಿ ನೀರು ಶುದ್ಧೀಕರಣ ಘಟಕದಲ್ಲಿ ಶುದ್ಧೀಕರಿಸಿದ ನೀರಿನ ಪ್ರಮುಖ ಪೈಪ್‍ಲೈನ್ ದುರಸ್ತಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.

ಈ ತುರ್ತು ದುರಸ್ತಿ ಕಾರ್ಯದ ಕಾರಣದಿಂದಾಗಿ ನೀರು ಶುದ್ಧೀಕರಣ ಘಟಕದ ಕಾರ್ಯಾಚರಣೆಯು ಸತತ ಎರಡು ದಿನಗಳ ಕಾಲ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. ಹೀಗಾಗಿ ಜುಲೈ 16 ಮತ್ತು 17 ರಂದು ನಗರದಾದ್ಯಂತ ಕುಡಿಯುವ ನೀರಿನ ಸರಬರಾಜು ಇರುವುದಿಲ್ಲ. ಸಾರ್ವಜನಿಕರು ಲಭ್ಯವಿರುವ ನೀರನ್ನು ಮಿತವಾಗಿ ಬಳಸಿಕೊಂಡು ಪಾಲಿಕೆಯೊಂದಿಗೆ ಸಹಕರಿಸಬೇಕಾಗಿ ಆಯುಕ್ತರು ಮನವಿ ಮಾಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *