ದಾವಣಗೆರೆ: ಅಲ್ಪಸಂಖ್ಯಾತರ ಸಮೂದಾಯಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ವಿದ್ಯಾರ್ಥಿಗಳಿಗೆ ಶೇ. 50 ರಷ್ಟು ಅಂಕಗಳಿಸಿದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ (ಎಸ್‍ಎಸ್‍ಪಿ) ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ 1ನೇ ತರಗತಿ ಯಿಂದ 8ನೇ ತರಗತಿಯವರೆಗೆ ಅರ್ಹ ವಿದ್ಯಾರ್ಥಿಗಳು ಸೆಪ್ಟೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಆನ್‍ಲೈನ್ ವೆಬ್ ಸೈಟ್ www.ssp.karnataka.gov.in ನಲ್ಲಿ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್: www.dom.karnataka.gov.in ಗೆ ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.





Leave a comment