SUDDIKSHANA KANNADA NEWS/ DAVANAGERE/ DATE:30-08-2023
ಮೈಸೂರು: ಪ್ರಧಾನ ಮಂತ್ರಿ ಮೋದಿಯವರೇ ನಮ್ಮ ಗ್ಯಾರಂಟಿ ಕಾರ್ಯಕ್ರಮಗಳ ಜಾರಿಯಿಂದ, ಬಡವ-ಮಧ್ಯಮ ವರ್ಗದವರ ಪರ ಕಾರ್ಯಕ್ರಮ ನೀಡಿದ್ದರಿಂದ ರಾಜ್ಯ ದಿವಾಳಿಯಾಗಲಿಲ್ಲ. ದಿವಾಳಿಯಾಗುತ್ತದೆ ಎನ್ನುವ ನಿಮ್ಮ ಮಾತು ಪರಮ ಸುಳ್ಳು ಎನ್ನುವುದು ಸಾಬೀತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದರು.
ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಸರ್ಕಾರದ ಚಾರಿತ್ರಿಕ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಸಂಭ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಸುದ್ದಿಯನ್ನೂ ಓದಿ:
Davanagere: ರವೀಂದ್ರನಾಥ್ ರಿಗೆ ಇರೋ ತೂಕ ಸಿದ್ದೇಶ್ವರಗಿಲ್ಲ, ಇಬ್ಬರ ನಡುವೆ ತುಂಬಾ ವ್ಯತ್ಯಾಸ ಇದೆ : ಎಸ್. ಎಸ್. ಮಲ್ಲಿಕಾರ್ಜುನ್
ನಾವು ಬಡವರ ಪರವಾದ, ಮಧ್ಯಮ ವರ್ಗದವರ ಪರವಾದ ಯೋಜನೆಗಳನ್ನು ರೂಪಿಸಿದಾಗ, ಘೋಷಿಸಿದಾಗ ಬಿಜೆಪಿ ನಾಯಕರು ಇನ್ನಿಲ್ಲದ ಆರೋಪಗಳನ್ನು ಮಾಡಿದರು. ಸುಳ್ಳುಗಳ ಸುರಿಮಳೆ ಸುರಿಸಿದರು. ಸ್ವತಃ ಪ್ರಧಾನಿ ಮೋದಿಯವರೇ ರಾಜ್ಯ ದಿವಾಳಿಯಾಗುತ್ತದೆ ಎಂದು ಭಾಷಣ ಮಾಡಿದರು. ಆದರೆ, ಈಗ ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ. ಪ್ರತಿದಿನ ಕೋಟಿಗೂ ಅಧಿಕ ಮಂದಿ ಪ್ರತಿ ದಿನ, ಪ್ರತಿ ತಿಂಗಳು ನಮ್ಮ ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆಯುತ್ತಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಅವರ ಮಾತುಗಳು ಸುಳ್ಳಾಗಿವೆ ಎಂದು ವಿವರಿಸಿದರು.
ಭಾಷಣದ ಹೈಲೈಟ್ಸ್:
- ನೂರು ದಿನಗಳ ಸಾಧನೆಯ ಪುಸ್ತಕ ಹೊರಗೆ ತಂದಿದ್ದೇವೆ. ಈ ಪುಸ್ತಕವನ್ನು ಮತ್ತು ನಾವು ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟಿದ್ದ ಭರವಸೆಗಳನ್ನು ಪಟ್ಟಿ ಮಾಡಿ ನೋಡಿ.
- ನಿಮಗೂ “ನುಡಿದಂತೆ ನಡೆದ ನಮ್ಮ ಸರ್ಕಾರದ ಬಗ್ಗೆ ಹೆಮ್ಮೆ ಬರುತ್ತದೆ”.
- ಭಾರತದ ರಾಜಕೀಯ ಇತಿಹಾಸದಲ್ಲೇ ಒಂದೇ ಯೋಜನೆಯಲ್ಲಿ ಇಷ್ಟು ದೊಡ್ಡ ಪ್ರಮಾಣದ ಜನೋಪಯೋಗಿ ಕಾರ್ಯಕ್ರಮ ಜಾರಿ ಆಗಿಲ್ಲ.
- ಶಕ್ತಿಯೋಜನೆಯಿಂದ 48.5 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ.
- ಇಷ್ಟು ಕಡಿಮೆ ಅವಧಿಯಲ್ಲಿ. ಅವರಿಗೆಲ್ಲಾ ಸಾವಿರಾರು ರೂಪಾಯಿ ಬಸ್ ಚಾರ್ಜ್ ಉಳಿತಾಯವಾಗಿದೆ.
- ಅನ್ನಭಾಗ್ಯಕ್ಕೆ ಅಕ್ಕಿ ಕೊಡಲು, ಕನ್ನಡ ನಾಡಿದ ಬಡವರು, ಮಧ್ಯಮ ವರ್ಗದವರು ಊಟ ಮಾಡಲು ಅಕ್ಕಿ ಕೊಡದೆ ಕೇಂದ್ರ ಸರ್ಕಾರ ನಮಗೆ ವಂಚಿಸಿತು.
- ನಾವು ಅಕ್ಕಿಯ ಬದಲಿಗೆ ಹಣ ಕೊಟ್ಟೆವು.
- ಪ್ರತೀ ದಿನ, ಪ್ರತೀ ತಿಂಗಳು ಕೋಟಿಗೂ ಅಧಿಕ ಕುಟುಂಬಗಳು ನಮ್ಮ ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆದುಕೊಳ್ಳುತ್ತಿವೆ.
ಕಾರ್ಯಕ್ರಮದ ಸೈಡ್ ಲೈಟ್ಸ್:
- ಇಡಿ ವೇದಿಕೆ ಪಿಂಕ್ ಬಣ್ಣದಲ್ಲಿ ಕಂಗೊಳಿಸುತ್ತಿತ್ತು.
- ವೇದಿಕೆಯುದ್ದಕ್ಕೂ ಮೇಲ್ಬಾಗದಲ್ಲಿ ತ್ರಿವರ್ಣ ಮತ್ತು ಪಿಂಕ್ ಕಾಂಬಿನೇಷನಲ್ಲಿ ಅಲಂಕರಿಸಲಾಗಿದೆ.
- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮತ್ತು ಮಹಿಳಾ ಕಾರ್ಯಕರ್ತರ ಪಡೆ ಪಿಂಕ್ ಧಿರಿಸಿನಲ್ಲಿತ್ತು.
- ವೇದಿಕೆಯಲ್ಲಿದ್ದ ಕುರ್ಚಿಗಳಿಗೆ ಪಿಂಕ್ ಹೊದಿಕೆ, ಐಡಿ ಕಾರ್ಡ್, ಟ್ಯಾಗ್ ಗಳು, ನೀರಿನ ಬಾಟಲ್ ಕೂಡ ಪಿಂಕ್ ಬಣ್ಣದ್ದಾಗಿವೆ
- ಮಹಿಳಾ ಕಾರ್ಯಕರ್ತೆಯರು ಪಿಂಕ್ ಬಣ್ಣದ ರಾಕಿಯನ್ನು ರಾಹುಲ್ ಗಾಂಧಿ ಅವರಿಗೆ ಕಟ್ಟುವ ಮೂಲಕ ರಕ್ಷಾಬಂಧನ ಸಂಭ್ರಮಿಸಿದರು.
- ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿ , ರಾಕಿ ಕಟ್ಟಿಸಿಕೊಂಡಿದ್ದನ್ನು ಪ್ರಸ್ತಾಪಿಸಿದರು.
- “ನಾನೊಬ್ಬ ಸಹೋದರನಾಗಿ ನಿಮಗೆ ಕೊಟ್ಟ ಮಾತನ್ನು ನಾನು ಉಳಿಸಿಕೊಳ್ಳುತ್ತೇನೆ.
- ನಮ್ಮ ಸರ್ಕಾರ ಹೇಗಿದ್ದರೂ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದೆ ಎಂದು ಮೆಚ್ಚುಗೆ ಸೂಚಿಸಿದ ರಾಹುಲ್ ಗಾಂಧಿ