ದಾವಣಗೆರೆ: ರಾಷ್ಟ್ರೀಯ ಪರೀಕ್ಷಾ ವ್ಯವಸ್ಥೆಯಲ್ಲಿ ಪದೇ ಪದೇ ಸಂಭವಿಸುತ್ತಿರುವ ವೈಫಲ್ಯಗಳು, ವಿಶೇಷವಾಗಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ನಿಟ್ಟುವಳ್ಳಿ ಎಸ್. ಪ್ರವೀಣ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಮಹಾತ್ಮ ಗಾಂಧೀಜಿ ಮತ್ತು ಅಣ್ಣಾ ಹಜಾರೆ ಅವರಂತಹ ಮಹನೀಯರ ಹೋರಾಟಗಳಿಗೆ ಹಿಂದಿನ ಸರ್ಕಾರಗಳು ಸ್ಪಂದಿಸುತ್ತಿದ್ದವು. ಆದರೆ, ಪ್ರಸ್ತುತ ಆಡಳಿತ ನಡೆಸುತ್ತಿರುವ ಕೇಂದ್ರ ಸರ್ಕಾರ ಹೋರಾಟಗಾರರ ಮೇಲೆಯೇ ದಬ್ಬಾಳಿಕೆ ನಡೆಸುತ್ತಿದೆ. ಯುವಜನತೆಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ, ಕನಿಷ್ಠ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುವಲ್ಲಿಯೂ ಸಂಪೂರ್ಣವಾಗಿ ವಿಫಲವಾಗಿದೆ. ಉದ್ಯೋಗಕ್ಕಾಗಿ ಧ್ವನಿ ಎತ್ತುತ್ತಿರುವ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸುವುದು ಅತ್ಯಂತ ಖಂಡನೀಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತೊಂದೆಡೆ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ತಂದೊಡ್ಡಿದ ಬೆದರಿಕೆಯಾಗಿದ್ದು, ಇಂತಹ ಕ್ರಮಗಳು ಪ್ರಜಾಪ್ರಭುತ್ವ ವಿರೋಧಿಯಾಗಿವೆ. ತಮ್ಮ ಹಕ್ಕುಗಳಿಗಾಗಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ತಕ್ಷಣವೇ ತಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ಕುರಿತು ಸ್ವತಂತ್ರ, ನಿಷ್ಪಕ್ಷಪಾತ ಹಾಗೂ ಕಾಲಮಿತಿಯ ತನಿಖೆ ನಡೆಯಬೇಕಿದೆ. ಈ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಧಿಕಾರಿಗಳು, ಪರೀಕ್ಷಾ ಸಂಸ್ಥೆಗಳು, ಮಧ್ಯವರ್ತಿಗಳು ಹಾಗೂ ಸಂಘಟಿತ ಜಾಲಗಳ ಪಾತ್ರವನ್ನು ಸಮಗ್ರವಾಗಿ ಪರಿಶೀಲಿಸಿ, ಶೀಘ್ರದಲ್ಲಿಯೇ ಸತ್ಯಾಂಶವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ನಿಟ್ಟುವಳ್ಳಿ ಎಸ್. ಪ್ರವೀಣ್ ಕುಮಾರ್ ಒತ್ತಾಯಿಸಿದ್ದಾರೆ.
- Davanagere Congress
- DAVANAGERE NEWS
- Dharmendra Pradhan Resignation
- NEET paper leak
- Nittuvalli Pravin Kumar
- NTA exam scam
- Sonam Wangchuk arrest
- Student protest India
- ಎನ್ಟಿಎ ಪರೀಕ್ಷೆ ಅಕ್ರಮ
- ಎನ್ಟಿಎ ಪರೀಕ್ಷೆ ಅಕ್ರಮನೀಟ್ ಅಕ್ರಮ
- ಕಾಂಗ್ರೆಸ್ ಪ್ರತಿಭಟನೆ
- ದಾವಣಗೆರೆ ಸುದ್ದಿ
- ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ನಿಟ್ಟುವಳ್ಳಿ ಪ್ರವೀಣ್ ಕುಮಾರ್
- ನೀಟ್ ಅಕ್ರಮ
- ಪ್ರಶ್ನೆಪತ್ರಿಕೆ ಸೋರಿಕೆ
- ಸೋನಮ್ ವಾಂಗ್ಚುಕ್ ಬಂಧನ





Leave a comment