Home ದಾವಣಗೆರೆ ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಬಿ. ಪಿ. ಹರೀಶ್ ಮೇಲೆ ನಾಲ್ಕೈದು ಮೊಟ್ಟೆ ಎಸೆದ ಕಾಂಗ್ರೆಸ್ ಕಾರ್ಯಕರ್ತರು!
ದಾವಣಗೆರೆಕ್ರೈಂ ನ್ಯೂಸ್ಬೆಂಗಳೂರು

ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಬಿ. ಪಿ. ಹರೀಶ್ ಮೇಲೆ ನಾಲ್ಕೈದು ಮೊಟ್ಟೆ ಎಸೆದ ಕಾಂಗ್ರೆಸ್ ಕಾರ್ಯಕರ್ತರು!

Share
ಬಿ. ಪಿ. ಹರೀಶ್
Share

ಬೆಂಗಳೂರು: ಹರಿಹರ ಬಿಜೆಪಿ ಶಾಸಕ ಬಿ. ಪಿ. ಹರೀಶ್ ಮೇಲೆ ನಾಲ್ಕೈದು ಮೊಟ್ಟೆ ಎಸೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

ದೇಶಾದ್ಯಂತ ತೀವ್ರ ಸದ್ದು ಮಾಡುತ್ತಿರುವ ನೀಟ್ ಪರೀಕ್ಷೆಯ ಅಕ್ರಮದ ಕಾವು ಈಗ ಕರ್ನಾಟಕಕ್ಕೂ ಪಸರಿಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿಯ ನಾಯಕರ ನಡುವೆ ಬೀದಿ ಕಾಳಗಕ್ಕೆ ಕಾರಣವಾಗಿದೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಹಾಗೂ ರಾಹುಲ್ ಗಾಂಧಿ ಅವರ ಬಂಧನವನ್ನು ಖಂಡಿಸಿ, ಕಾಂಗ್ರೆಸ್ ನಾಯಕ ಮನೋಹರ್ ನೇತೃತ್ವದಲ್ಲಿ ಕಾರ್ಯಕರ್ತರು ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ತಕ್ಷಣ ರಂಗಕ್ಕಿಳಿದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ಪ್ರತ್ಯುತ್ತರ ಹಾಗೂ ಮೊಟ್ಟೆ ಎಸೆತ:

ಕಾಂಗ್ರೆಸ್‌ನ ಈ ನಡೆಯನ್ನು ವಿರೋಧಿಸಿ ಬಿಜೆಪಿ ನಾಯಕರು ಮತ್ತು ಶಾಸಕರು ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ  ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಕೆಲ ಕಿಡಿಗೇಡಿ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದ ಘಟನೆ ನಡೆಯಿತು. ಘಟನೆಯಿಂದ ಸ್ಥಳದಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಶಾಸಕರನ್ನು ಸುರಕ್ಷಿತವಾಗಿ ತಮ್ಮ ವಾಹನದಲ್ಲಿ ಕರೆದೊಯ್ದರು ಹಾಗೂ ಮೊಟ್ಟೆ ಎಸೆದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

ಇನ್ನೊಂದೆಡೆ ಜುಲೈ 20ರ ಪ್ರತಿಭಟನೆ ಕೇವಲ ಮುನ್ಸೂಚನೆ ಮಾತ್ರವಾಗಿದ್ದು, ಸರ್ಕಾರ ಬೇಡಿಕೆಗೆ ಮಣಿಯದಿದ್ದರೆ ಲಕ್ಷಾಂತರ ಮಂದಿ ದೆಹಲಿಗೆ ಮುತ್ತಿಗೆ ಹಾಕಲಿದ್ದಾರೆ ಎಂದು ಸಿಜೆಪಿ ಸಂಘಟನೆ ಹೊಸ ಎಚ್ಚರಿಕೆ ನೀಡಿದೆ. ಮಾತ್ರವಲ್ಲ, ಹರಿಹರ ಶಾಸಕ ಬಿ. ಪಿ. ಹರೀಶ್ ಮೇಲೆ ಮೊಟ್ಟೆ ಎಸೆದಿರುವುದು ರಾಜಕೀಯ ಸಂಘರ್ಷಕ್ಕೆ ಕಾರಣವಾಗಲಿದೆ.

Share

Leave a comment

Leave a Reply

Your email address will not be published. Required fields are marked *