Home ಕ್ರೈಂ ನ್ಯೂಸ್ ಹರಿಹರ ಶಾಸಕ ಬಿ. ಪಿ. ಹರೀಶ್ ಮೇಲೆ ಮೊಟ್ಟೆ ಎಸೆದು ಕಾಂಗ್ರೆಸ್ ‘ಗೂಂಡಾಗಿರಿ’: ದಾವಣಗೆರೆಯಲ್ಲಿ ಬಿಜೆಪಿ ಉತ್ತರ ಯುವ ಮೋರ್ಚಾ ರೊಚ್ಚಿಗೆದ್ದು ಪ್ರತಿಭಟನೆ
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ಹರಿಹರ ಶಾಸಕ ಬಿ. ಪಿ. ಹರೀಶ್ ಮೇಲೆ ಮೊಟ್ಟೆ ಎಸೆದು ಕಾಂಗ್ರೆಸ್ ‘ಗೂಂಡಾಗಿರಿ’: ದಾವಣಗೆರೆಯಲ್ಲಿ ಬಿಜೆಪಿ ಉತ್ತರ ಯುವ ಮೋರ್ಚಾ ರೊಚ್ಚಿಗೆದ್ದು ಪ್ರತಿಭಟನೆ

Share
ದಾವಣಗೆರೆ
Share

ದಾವಣಗೆರೆ: ಬಿಜೆಪಿ ಶಾಸಕ ಬಿ. ಪಿ. ಹರೀಶ್, ಅಶ್ವತ್ಥ್ ನಾರಾಯಣ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಗೂಂಡಾಗಿರಿ ನಡವಳಿಕೆ ಖಂಡಿಸಿ ದಾವಣಗೆರೆ ಬಿಜೆಪಿ ಯುವ ಮೋರ್ಚಾ ಉತ್ತರ ವಲಯದ ವತಿಯಿಂದ ನಗರದ ಜಯದೇವ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಯುವ ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ಧೋರಣೆ ಹಾಗೂ ಶಾಸಕರ ಮೇಲಿನ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಅಧ್ಯಕ್ಷ ಮೆಳ್ಳಕಟ್ಟೆ ನಾಗರಾಜ್, “ವಿರೋಧ ಪಕ್ಷದ ಶಾಸಕರ ಮೇಲೆ ಬೆದರಿಕೆ ಹಾಗೂ ದೌರ್ಜನ್ಯ ಎಸಗುವುದು ಪ್ರಜಾಪ್ರಭುತ್ವ ವಿರೋಧಿ ನಡವಳಿಕೆ. ಇಂತಹ ಗೂಂಡಾಗಿರಿಯನ್ನು ಬಿಜೆಪಿ ಎಂದಿಗೂ ಸಹಿಸುವುದಿಲ್ಲ” ಎಂದು ಕಿಡಿಕಾರಿದರು.

ಕಾಂಗ್ರೆಸ್‌ ಕಛೇರಿಗೆ ಮುತ್ತಿಗೆ ಯತ್ನದಲ್ಲಿ ಸಾಗುತ್ತಿದ್ದ ವೇಳೆ ಕಾಂಗ್ರೆಸ್ ಕಚೇರಿಯಲ್ಲಿ ಮಚ್ಚು, ಲಾಂಗು, ಮೊಟ್ಟೆಗಳನ್ನು ಸಂಗ್ರಹಿಸಿಟ್ಟುಕೊಂಡು ಮಾಜಿ ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ್, ಶಾಸಕರಾದ ಸಿ.ಕೆ ರಾಮಮೂರ್ತಿ ಅವರ ಮೇಲೆ ಹಲ್ಲೆ ಮಾಡಲಾಗಿದೆ. ಶಾಸಕರಾದ ಬಿ.ಪಿ ಹರೀಶ್ ಅವರಿಗೆ ಮೊಟ್ಟೆಯಿಂದ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ ಪಕ್ಷದ ಜಿಲ್ಲಾಧ್ಯಕ್ಷರು, ಪ್ರಮುಖರು ಹಾಗೂ ಕಾರ್ಯಕರ್ತರ ಮೇಲೆಯೂ ಹಲ್ಲೆ ನಡೆಸಿರುವುದನ್ನು ಖಂಡಿಸಿ ಬಿಜೆಪಿ ನಿಯೋಗವು ಪೊಲೀಸ್‌ ಆಯುಕ್ತರಿಗೆ ದೂರು ಸಲ್ಲಿಸಿದೆ. ಪೊಲೀಸರು ಈ ಕೂಡಲೇ ಕಾಂಗ್ರೆಸ್‌ ಗೂಂಡಾಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಬೃಹತ್ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಲಕ್ಷ್ಮಣ್ ಹಾಗೂ ಧನಂಜಯ್ ಕಡ್ಲೆಬಾಳ್, ಉತ್ತರ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ತಾರೇಶ ನಾಯ್ಕ್, ಪ್ರಧಾನ ಕಾರ್ಯದರ್ಶಿಗಳಾದ ಗುತ್ತೂರು ಮಂಜುನಾಥ್ ಮತ್ತು ಜಯರುದ್ರಪ್ಪ, ಉತ್ತರ ವಿಧಾನಸಭಾ ಯುವ ಮೋರ್ಚಾ ಅಧ್ಯಕ್ಷ ಹರೀಶ್ ಶಾಮನೂರು, ಜಿಲ್ಲಾ ವಿವಿಧ ಮೋರ್ಚಾಗಳ ಅಧ್ಯಕ್ಷರಾದ ರಾಕೇಶ್ ಬಜರಂಗಿ, ಗೌತಮ್ ಜೈನ್, ಚೇತು ಭಾಯಿ, ಜಿಲ್ಲಾ ಖಜಾಂಚಿ ವಿಶ್ವಾಸ್ ಸೇರಿದಂತೆ ಬಿಜೆಪಿ ವಿವಿಧ ಘಟಕಗಳ ಪದಾಧಿಕಾರಿಗಳು, ಹಿರಿಯ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಭಾಗವಹಿಸಿ ಪ್ರತಿಭಟನೆಗೆ ಸಾಥ್ ನೀಡಿದರು.

Share

Leave a comment

Leave a Reply

Your email address will not be published. Required fields are marked *