Home ದಾವಣಗೆರೆ ದಾವಣಗೆರೆ ಜಿಲ್ಲೆಯ 94 ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ₹2.98 ಕೋಟಿ ಅನುದಾನಕ್ಕೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಆಗ್ರಹ
ದಾವಣಗೆರೆಬೆಂಗಳೂರು

ದಾವಣಗೆರೆ ಜಿಲ್ಲೆಯ 94 ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ₹2.98 ಕೋಟಿ ಅನುದಾನಕ್ಕೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಆಗ್ರಹ

Share
ದಾವಣಗೆರೆ
Share

ದಾವಣಗೆರೆ/ ಚಿತ್ರದುರ್ಗ: ದಾವಣಗೆರೆ ಜಿಲ್ಲೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ, ಅರಣ್ಯ ಆಡಳಿತ ಪುನರ್‌ವ್ಯವಸ್ಥೆ ಹಾಗೂ ಗ್ರಾಮೀಣ ಮಹಿಳಾ ಸ್ವಸಹಾಯ ಸಂಘಗಳಿಗೆ ಉತ್ತೇಜನ ನೀಡುವಂತೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪ ಸಭಾಂಗಣದಲ್ಲಿ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಂಗಳೂರು ಪ್ರಾದೇಶಿಕ ವಿಭಾಗ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ವಿಷಯಗಳನ್ನು ಪ್ರಸ್ತಾಪಿಸಿದರು.

ದಾವಣಗೆರೆ ಜಿಲ್ಲೆಯಲ್ಲಿರುವ 799 ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ 94 ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ಗ್ರಾಮೀಣ ಜನತೆಗೆ ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಯಾಗುತ್ತಿದೆ. ಹೀಗಾಗಿ, ಈ ಘಟಕಗಳ ದುರಸ್ತಿಗಾಗಿ ₹2 ಕೋಟಿ 98 ಲಕ್ಷ 69 ಸಾವಿರ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಅವರು ಮನವಿ ಮಾಡಿದರು.

ಜಿಲ್ಲೆಯಲ್ಲಿರುವ ಎರಡು ಪ್ರಾದೇಶಿಕ ಅರಣ್ಯ ವಿಭಾಗಗಳು ಭದ್ರಾವತಿ ಅರಣ್ಯ ವಿಭಾಗದ ಆಡಳಿತ ವ್ಯಾಪ್ತಿಗೆ ಒಳಪಟ್ಟಿರುವುದರಿಂದ ಆಡಳಿತಾತ್ಮಕ ತೊಂದರೆಗಳು ಉಂಟಾಗುತ್ತಿವೆ. ಈ ಎರಡೂ ವಿಭಾಗಗಳನ್ನು ದಾವಣಗೆರೆ ಆಡಳಿತ ವ್ಯಾಪ್ತಿಗೆ ವರ್ಗಾಯಿಸುವ ಮೂಲಕ ಸ್ಥಳೀಯ ಮಟ್ಟದಲ್ಲಿ ಸಮರ್ಪಕ ಆಡಳಿತ ಹಾಗೂ ಸಾರ್ವಜನಿಕ ಸೇವೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದರು.

ಗ್ರಾಮೀಣ ಭಾಗದ ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ಸರ್ಕಾರದಿಂದ ಖರೀದಿ ಹಾಗೂ ಮಾರುಕಟ್ಟೆ ಬೆಂಬಲ ಒದಗಿಸಿ, ಅವರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಅಗತ್ಯ ಪ್ರೋತ್ಸಾಹ ನೀಡಬೇಕು ಎಂದು ಅವರು ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಸಚಿವರುಗಳಾದ ಈಶ್ವರ್ ಖಂಡ್ರೆ,ರಾಮಲಿಂಗಾರೆಡ್ಡಿ,ಕೆ.ಹೆಚ್ ಮುನಿಯಪ್ಪ ಸೇರಿದಂತೆ ಶಾಸಕರಾದ ಎಸ್ ಎಸ್ ಮಲ್ಲಿಕಾರ್ಜುನ್, ಸಮರ್ಥ್ ಶಾಮನೂರು, ಡಿ.ಜಿ ಶಾಂತನಗೌಡ, ಶಿವಗಂಗಾ ಬಸವರಾಜ್, ಕೆ.ಎಸ್ ಬಸವಂತಪ್ಪ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *