SUDDIKSHANA KANNADA NEWS/ DAVANAGERE/ DATE:31-12-2024
ದಾವಣಗೆರೆ : ನಗರದ ಹೈಸ್ಕೂಲ್ ಮೈದಾನದಲ್ಲಿ ಜನವರಿ 5 ರಂದು ನಡೆಯುತ್ತಿರುವ ದಾಸ ಶ್ರೇಷ್ಠ ಶ್ರೀ ಭಕ್ತ ಕನಕದಾಸರ 537ನೇ ಜಯಂತೋತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನ ನಗರದ ಮಹಾಪೌರರಾದ ಕೆ. ಚಮನ್ ಸಾಬ್ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಕೆ ಶೆಟ್ಟಿ ಅವರು ವೀಕ್ಷಿಸಿದರು.
ಈ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಪರಮಪೂಜ್ಯರು ಆಗಮಿಸುತ್ತಿರುವ ಕಾರಣ ಕಾರ್ಯಕ್ರಮದ ಸಿದ್ಧತೆಯ ಬಗ್ಗೆ ಸಮಾಲೋಚನೆ ನಡೆಸಿ ಸ್ಥಳದಲ್ಲಿ ಪೂರ್ವಸಿದ್ಧತೆಯ ಬಗ್ಗೆ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಜಿ. ಶಿವಕುಮಾರ್, ಅಯೂಬ್ ಪೈಲ್ವಾನ್, ಎಸ್. ಮಲ್ಲಿಕಾರ್ಜುನ್, ಉಮೇಶ್, ರಾಕೇಶ್ ಡಿ., ಕವಿತಾ ಚಂದ್ರಶೇಖರ್ ಮುಂತಾದವರಿದ್ದರು.