Home ಕ್ರೈಂ ನ್ಯೂಸ್ ದಾವಣಗೆರೆ ದುರ್ಗಾಂಬಿಕಾ ದೇಗುಲದಲ್ಲಿ ಚಿನ್ನಾಭರಣ ಕಳವು ಕೇಸ್: ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ – ಎಸ್.ಎಸ್. ಮಲ್ಲಿಕಾರ್ಜುನ್ ಸ್ಪಷ್ಟನೆ
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ದಾವಣಗೆರೆ ದುರ್ಗಾಂಬಿಕಾ ದೇಗುಲದಲ್ಲಿ ಚಿನ್ನಾಭರಣ ಕಳವು ಕೇಸ್: ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ – ಎಸ್.ಎಸ್. ಮಲ್ಲಿಕಾರ್ಜುನ್ ಸ್ಪಷ್ಟನೆ

Share
ದಾವಣಗೆರೆ
Share

ದಾವಣಗೆರೆ: ಮಧ್ಯಕರ್ನಾಟಕ ಶಕ್ತಿ ದೇವತೆ ದುರ್ಗಾಂಬಿಕಾ ದೇವಸ್ಥಾನದಲ್ಲಿ ಕಳ್ಳತನವಾದ ಐದರಿಂದ ಆರು ವಸ್ತುಗಳ ಕುರಿತಂತೆ ತನಿಖೆ ನಡೆಸಲಾಗುತ್ತಿದೆ. ಪೊಲೀಸರು ವಿಚಾರಣೆ ನಡೆಸಿ ತನಿಖೆ ನಡೆಸಿದ ಬಳಿಕ ಸತ್ಯಾಂಶ ಹೊರ ಬರಲಿದೆ. ಇದರಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಎಸ್. ಎಸ್. ಮಲ್ಲಿಕಾರ್ಜುನ್ ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಶವಂತರಾವ್ ಜಾಧವ್ ಗೆ ಬೇರೆ ಕೆಲಸ ಇಲ್ಲ. ಜನರು ನೋಡುತ್ತಿದ್ದಾರೆ ಎಂದು ಹೇಳಿದರು.

ಮಧ್ಯಕರ್ನಾಟಕದ ಪ್ರಸಿದ್ಧ ಶಕ್ತಿ ದೇವತೆ, ದಾವಣಗೆರೆಯ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ಕೆಲವು ಆಭರಣಗಳು ಸಿಗದಿರುವ ಹಾಗೂ ಕಳ್ಳತನವಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ  ಎಸ್.ಎಸ್. ಮಲ್ಲಿಕಾರ್ಜುನ್ ಪ್ರತಿಕ್ರಿಯಿಸಿದ್ದಾರೆ. “ಈ ಸೂಕ್ಷ್ಮ ವಿಚಾರದಲ್ಲಿ ಯಾರೂ ರಾಜಕೀಯ ತರುವುದು ಸರಿಯಲ್ಲ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿ ವಿವರ ನೀಡಿದ ಅವರು, “ದೇವಸ್ಥಾನದ ಐದರಿಂದ ಆರು ವಸ್ತುಗಳು/ಆಭರಣಗಳು ಪ್ರಸ್ತುತ ಸಿಗುತ್ತಿಲ್ಲ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ವಿಚಾರಣೆ ಮತ್ತು ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣಗೊಂಡ ಬಳಿಕ ಸಂಪೂರ್ಣ ಸತ್ಯಾಂಶ ಹೊರಬರಲಿದೆ,” ಎಂದರು.

ವಿರೋಧಿಗಳ ಆರೋಪಕ್ಕೆ ತಿರುಗೇಟು ನೀಡಿದ ಶಾಸಕರು, “ಯಶವಂತರಾವ್ ಜಾಧವ್ ಅವರಿಗೆ ಬೇರೆ ಕೆಲಸವಿಲ್ಲ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಪ್ರತಿಯೊಂದಕ್ಕೂ ಅದರದೇ ಆದ ರೀತಿ, ನೀತಿ ಹಾಗೂ ಧರ್ಮವಿರುತ್ತದೆ. ಅರ್ಚಕರು (ಪೂಜಾರಪ್ಪ) ಹಸ್ತಾಂತರ ಮಾಡಬೇಕಿದ್ದ ಆಭರಣಗಳಲ್ಲಿ ಕೆಲವು ವ್ಯತ್ಯಾಸಗಳಾಗಿದ್ದು, ಅವರನ್ನು ಕರೆಸಿ ಮಾತನಾಡಲಾಗಿದೆ. ಕಾಣೆಯಾಗಿರುವ ಆಭರಣಗಳನ್ನು ತಂದುಕೊಡುವಂತೆ ಸೂಚಿಸಲಾಗಿದೆ,” ಎಂದು ತಿಳಿಸಿದರು.

“ಭಕ್ತರು ನೀಡುವ ಚಿನ್ನಾಭರಣಗಳನ್ನು ಕರಗಿಸಿ ಗಟ್ಟಿ ಮಾಡಿಸಿಡುವ ಪದ್ಧತಿ ಮೊದಲಿನಿಂದಲೂ ಇದೆ. ಆಡಳಿತ ಮಂಡಳಿಯು ದೇಗುಲದ ಅಭಿವೃದ್ಧಿ ಹಾಗೂ ಬಿಗಿ ಆಡಳಿತಕ್ಕೆ ಬದ್ಧವಾಗಿದೆ. ಪೊಲೀಸರು ತನಿಖೆಗೆ ಕಾಲಾವಕಾಶ ತೆಗೆದುಕೊಂಡಿದ್ದು, ಸತ್ಯ ಬಹಿರಂಗವಾಗಲಿದೆ,” ಎಂದು ಮಲ್ಲಿಕಾರ್ಜುನ್ ವಿಶ್ವಾಸ ವ್ಯಕ್ತಪಡಿಸಿದರು.

Share

Leave a comment

Leave a Reply

Your email address will not be published. Required fields are marked *