Home ದಾವಣಗೆರೆ ಬೆಂಗಳೂರು ಕ್ಯಾಬ್ ಯುವತಿ ಕಿರುಕುಳ ಪ್ರಕರಣ: ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ – DG-IGP ಎಂ.ಎ. ಸಲೀಂ ಎಚ್ಚರಿಕೆ
ದಾವಣಗೆರೆಕ್ರೈಂ ನ್ಯೂಸ್ನವದೆಹಲಿಬೆಂಗಳೂರು

ಬೆಂಗಳೂರು ಕ್ಯಾಬ್ ಯುವತಿ ಕಿರುಕುಳ ಪ್ರಕರಣ: ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ – DG-IGP ಎಂ.ಎ. ಸಲೀಂ ಎಚ್ಚರಿಕೆ

Share
ಯುವತಿ
Share

ದಾವಣಗೆರೆ: ಬೆಂಗಳೂರಿನಲ್ಲಿ ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಅತ್ಯಂತ ಕಠಿಣ ಹಾಗೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಡಿಜಿ ಮತ್ತು ಐಜಿಪಿ (DG & IGP) ಎಂ. ಎ. ಸಲೀಂ ಅವರು ಸ್ಪಷ್ಟಪಡಿಸಿದ್ದಾರೆ.

ದಾವಣಗೆರೆ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹಿಳೆಯರ ಸುರಕ್ಷತೆ ವಿಷಯದಲ್ಲಿ ಇಲಾಖೆ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ. ಯಾರೇ ಈ ರೀತಿಯ ಅಮಾನವೀಯ ಅಥವಾ ಕಾನೂನುಬಾಹಿರ ಕೃತ್ಯ ಎಸಗಿದ್ದರೂ ಅವರ ವಿರುದ್ಧ ಅನಿವಾರ್ಯವಾಗಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

‘ಪೊಲೀಸರ ಮೇಲೆ ಜನರಿಗೆ ನಂಬಿಕೆ ಬರಬೇಕು’

ಇದೇ ವೇಳೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಖಡಕ್ ಸೂಚನೆ ನೀಡಿದ ಸಲೀಂ ಅವರು, “ಸಾರ್ವಜನಿಕರು ಮತ್ತು ಸಮಾಜಕ್ಕೆ ಪೊಲೀಸರ ಮೇಲೆ ಸಂಪೂರ್ಣ ನಂಬಿಕೆ ಬರುವ ರೀತಿಯಲ್ಲಿ ಪ್ರತಿಯೊಬ್ಬ ಅಧಿಕಾರಿಯೂ ಕರ್ತವ್ಯ ನಿರ್ವಹಿಸಬೇಕು” ಎಂದು ನಿರ್ದೇಶಿಸಿದರು.

ಜನರು ಪೊಲೀಸರ ಮೇಲೆ ಇಡುವ ವಿಶ್ವಾಸ ಹಾಗೂ ನಂಬಿಕೆಯ ಆಧಾರದ ಮೇಲೆಯೇ ಇಡೀ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ (Performance) ನಿಂತಿದೆ ಎಂದು ಅಭಿಪ್ರಾಯಪಟ್ಟ ಅವರು, ಪೊಲೀಸ್ ಠಾಣೆಗಳ ಮಟ್ಟದಲ್ಲಿ ಪ್ರತಿಯೊಂದು ಕೆಲಸವೂ ಸಂಪೂರ್ಣ ಪಾರದರ್ಶಕವಾಗಿ ನಡೆಯಬೇಕು ಎಂದು ಸೂಚನೆ ನೀಡಿದರು.

Share

Leave a comment

Leave a Reply

Your email address will not be published. Required fields are marked *