Home ದಾವಣಗೆರೆ ಕ್ರಿಮಿನಲ್‌ಗಳ ಜೊತೆ ಕೈಜೋಡಿಸುವ ಪೊಲೀಸರಿಗೆ ಉಳಿಗಾಲವಿಲ್ಲ: ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ ಖಡಕ್ ಸಂದೇಶ
ದಾವಣಗೆರೆಕ್ರೈಂ ನ್ಯೂಸ್ಬೆಂಗಳೂರು

ಕ್ರಿಮಿನಲ್‌ಗಳ ಜೊತೆ ಕೈಜೋಡಿಸುವ ಪೊಲೀಸರಿಗೆ ಉಳಿಗಾಲವಿಲ್ಲ: ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ ಖಡಕ್ ಸಂದೇಶ

Share
ಪೊಲೀಸ್
Share

ದಾವಣಗೆರೆ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ಲೋಪ ಹಾಗೂ ಅಪರಾಧ ಕೃತ್ಯಗಳಲ್ಲಿ ಪೊಲೀಸ್ ಅಧಿಕಾರಿಗಳೇ ಭಾಗಿಯಾಗುತ್ತಿರುವ ಪ್ರಕರಣಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದ್ದು, ಇಂತಹ ಅಧಿಕಾರಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು (DG & IGP) ಹಾಗೂ ಹಿರಿಯ ಐಪಿಎಸ್ ಅಧಿಕಾರಿ ಎಂ. ಎ. ಸಲೀಂ ಅವರು ಎಚ್ಚರಿಸಿದ್ದಾರೆ.

ದಾವಣಗೆರೆಯಲ್ಲಿ ಇತ್ತೀಚಿನ ಬೆಳವಣಿಗೆಗಳು ಹಾಗೂ ಕೆಲ ಪ್ರಕರಣಗಳಲ್ಲಿ ಪೊಲೀಸ್ ಸಿಬ್ಬಂದಿಯ ಭಾಗಿದಾರಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಲಾಖೆಯ ಶಿಸ್ತು ಮತ್ತು ಗೌರವವನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಪ್ರಮುಖ ಪ್ರತಿಕ್ರಿಯೆ ನೀಡಿದರು.

ಕಠಿಣ ಕ್ರಮ ಖಚಿತ:

“ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಯ ಪ್ರಾಥಮಿಕ ಕರ್ತವ್ಯ. ಅದನ್ನು ಬಿಟ್ಟು ಅಧಿಕಾರಿಗಳೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವುದು ಅಥವಾ ಕ್ರಿಮಿನಲ್‌ಗಳೊಂದಿಗೆ ಕೈಜೋಡಿಸುವುದು ಅಕ್ಷಮ್ಯ ಅಪರಾಧ. ಇಂತಹ ಕೃತ್ಯಗಳಲ್ಲಿ ಭಾಗಿಯಾದ ಅಧಿಕಾರಿ ಅಥವಾ ಸಿಬ್ಬಂದಿ ಎಷ್ಟೇ ಪ್ರಭಾವಿಯಾಗಿದ್ದರೂ ಅವರ ವಿರುದ್ಧ ಕಾನೂನು ರೀತಿಯಲ್ಲಿ ಕಠಿಣ ಕ್ರಮ ಜರುಗಿಸುವುದು ಖಚಿತ,” ಎಂದು ಅವರು ಸ್ಪಷ್ಟಪಡಿಸಿದರು.

ಸಾರ್ವಜನಿಕರ ನಂಬಿಕೆ ಉಳಿಸಿಕೊಳ್ಳಿ:

“ಪೊಲೀಸ್ ಇಲಾಖೆಯ ಮೇಲೆ ಜನಸಾಮಾನ್ಯರಿಗೆ ನಂಬಿಕೆ ಮತ್ತು ಗೌರವ ಬರಬೇಕು. ಜನರು ನಮ್ಮ ಮೇಲೆ ವಿಶ್ವಾಸ ಇಡಬೇಕೆಂದರೆ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯೂ ಅತ್ಯಂತ ಪ್ರಾಮಾಣಿಕತೆ, ಪಾರದರ್ಶಕತೆ ಹಾಗೂ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು. ರಕ್ಷಕರೇ ಭಕ್ಷಕರಾಗುವ ವಾತಾವರಣ ನಿರ್ಮಾಣವಾಗಲು ನಾವು ಎಂದಿಗೂ ಬಿಡುವುದಿಲ್ಲ,” ಎಂದು ಸಲೀಂ ಅವರು ತಿಳಿಸಿದರು.

Share

Leave a comment

Leave a Reply

Your email address will not be published. Required fields are marked *