Home ದಾವಣಗೆರೆ ದಾವಣಗೆರೆ ಜಿಲ್ಲೆ ಹೊನ್ನಾಳಿಯ ಸಾಸ್ವೆಹಳ್ಳಿಯಲ್ಲಿ ವೈದ್ಯರ ನಿರ್ಲಕ್ಷ್ಯ, ಅವಧಿ ಮುಗಿದ ಔಷಧ ನೀಡಿದ ಆರೋಪ: 11 ತಿಂಗಳ ಕಂದಮ್ಮ ಸಾವು!
ದಾವಣಗೆರೆಕ್ರೈಂ ನ್ಯೂಸ್ಬೆಂಗಳೂರು

ದಾವಣಗೆರೆ ಜಿಲ್ಲೆ ಹೊನ್ನಾಳಿಯ ಸಾಸ್ವೆಹಳ್ಳಿಯಲ್ಲಿ ವೈದ್ಯರ ನಿರ್ಲಕ್ಷ್ಯ, ಅವಧಿ ಮುಗಿದ ಔಷಧ ನೀಡಿದ ಆರೋಪ: 11 ತಿಂಗಳ ಕಂದಮ್ಮ ಸಾವು!

Share
ದಾವಣಗೆರೆ
Share

ದಾವಣಗೆರೆ: ವೈದ್ಯರ ನಿರ್ಲಕ್ಷ್ಯ ಹಾಗೂ ಅವಧಿ ಮಗಿದ ಔಷಧ ನೀಡಿದ್ದ ಕಾರಣಕ್ಕೆ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ 11 ತಿಂಗಳ ಮಗು ಸಾವನ್ನಪ್ಪಿದೆ ಎಂದು ಕುಟುಂಬಸ್ಥರು ಆರೋಪಿಸಿರುವ ಘಟನೆ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿಯಲ್ಲಿ ನಡೆದಿದೆ.

ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿಯ ಹನುಮನಹಳ್ಳಿ ಗ್ರಾಮದ ಲೋಕೇಶ್ ಹಾಗೂ ವಸುಂಧರಾ ದಂಪತಿ ಪುತ್ರಿ ಪೂರ್ವಿಕಾ (11) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಪೂರ್ವಿಕಾಳನ್ನು ಚಿಕಿತ್ಸೆಗಾಗಿ ಪೋಷಕರು ಸಾಸ್ವೆಹಳ್ಳಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆಸ್ಪತ್ರೆಯಲ್ಲಿ ವೈದ್ಯರು ನೀಡಿದ ಔಷಧಿ ಮಗುವಿಗೆ ಹಾಕಿದ ಕೆಲವೇ ಕ್ಷಣಗಳಲ್ಲಿ ಮಗುವಿನ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದೆ. ಈ ವೇಳೆ ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ವೈದ್ಯರ ಯಡವಟ್ಟಿನಿಂದಾಗಿ ಹಾಗೂ ಅವಧಿ ಮುಗಿದ ಔಷಧ ನೀಡಿದ್ದರಿಂದಲೇ ಮಗಳು ಪೂರ್ವಿಕಾ ಸಾವನ್ನಪ್ಪಿದ್ದಾಳೆ ಎಂದು ಪೋಷಕರು ಆರೋಪಿಸಿದ್ದು, ಮಗುವನ್ನು ಕಳೆದಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Share

Leave a comment

Leave a Reply

Your email address will not be published. Required fields are marked *

Related Articles