ದಾವಣಗೆರೆ: ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಆಗಸ್ಟ್ 2 ರಂದು ಬೆಳಿಗ್ಗೆ 10.30 ರಿಂದ 1 ಗಂಟೆಯವರಿಗೆ ನಗರದ ವಿವಿಧ 19 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕ ಮತ್ತು ಶಿಸ್ತುಬದ್ಧವಾಗಿ ನಡೆಸಲು ನಿಯೋಜಿತ ಪರೀಕ್ಷಾ ವೀಕ್ಷಕರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರೀಕ್ಷಾ ಕೇಂದ್ರಗಳಿಗೆ ಶಿವಧಾರ, ಜನಿವಾರ, ಉಡುದಾರ, ಮಾಂಗಲ್ಯ ಮೂಗುತಿ ಮತ್ತು ವಿಭೂತಿಗೆ ಅವಕಾಶವಿದೆ. ನಿಯೋಜಿತರಾಗಿರುವ ಅಧಿಕಾರಿ/ಸಿಬ್ಬಂದಿಗಳು ಡ್ರೆಸ್ ಕೋಡ್ ಅಧಿಕಾರಿಗಳು , ಪರೀಕ್ಷೆ ಪ್ರಾರಂಭವಾಗುವ ಮುನ್ನವೇ ನಿಗದಿತ ಪರೀಕ್ಷಾ ಕೊಠಡಿಗೆ ತೆರಳಿ ವರದಿ ಮಾಡಿಕೊಳ್ಳುವುದು. ಪ್ರಾಧಿಕಾರವು ನೀಡಿರುವ ಉಡುಪಿನ ಸಂಹಿತೆ ಮತ್ತು ನಿರ್ದೇಶನಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆಯೇ ಎಂಬುದನ್ನು ಸೂಕ್ಷ್ಮವಾಗಿ ಮೇಲ್ವಿಚಾರಣೆ ಮಾಡುವುದು. ಸಿಬ್ಬಂದಿಗಳು ಪ್ರಾಧಿಕಾರದ ನಿರ್ದೇಶನದಂತೆ ಅಭ್ಯರ್ಥಿಗಳ ಫ್ರಿಸ್ಕಿಂಗ್ (ಅಂಗಶೋಧನೆ) ಪ್ರಕ್ರಿಯೆಯನ್ನು ಸರಿಯಾಗಿ ನಡೆಸುತ್ತಿರುವುದನ್ನು ಖಾತರಿಪಡಿಸಿಕೊಳ್ಳುವುದು ಎಂದರು.
ಪ್ರಾಧಿಕಾರದಿಂದ ‘ಫೇಶಿಯಲ್ ರೆಕಗ್ನಿಷನ್’ ಸಂಬಂಧ ನಿಯೋಜಿತರಾದ ನೊಡಲ್ ಅಧಿಕಾರಿ ಹಾಗೂ ಸಿಬ್ಬಂದಿಗಳ ಕಾರ್ಯವೈಖರಿಯನ್ನು ಮೇಲ್ವಿಚಾರಣೆ ಮಾಡುವುದು. ಕೊಠಡಿಯಲ್ಲಿರುವ ಸಿ.ಸಿ.ಟಿ.ವಿ ಕ್ಯಾಮೆರಾಗಳು ಹಾಗೂ ಇತರ ಸಂಪರ್ಕ ಸಾಧನಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ತಪಾಸಣೆ ಮಾಡುವುದು. ಪರೀಕ್ಷಾ ಸಿಬ್ಬಂದಿ, ತಪಾಸಣಾ ತಂಡಗಳು, ಸ್ವಚ್ಛತಾ ಸಿಬ್ಬಂದಿ ಹಾಗೂ ಸಿಬ್ಬಂದಿಗಳು ಸೇರಿದಂತೆ ಯಾರೂ ಸಹ ಪರೀಕ್ಷಾ ಕೇಂದ್ರ ಅಥವಾ ನಿಷೇಧಿತ ಪ್ರದೇಶಗಳಿಗೆ ಯಾವುದೇ ರೀತಿಯ ಅನಗತ್ಯ ಅಥವಾ ತಾಂತ್ರಿಕ ಸಾಧನಗಳನ್ನು ತೆಗೆದುಕೊಂಡು ಹೋಗದಂತೆ ಕಟ್ಟುನಿಟ್ಟಾಗಿ ತಡೆಯಬೇಕು.
ಯಾವುದೇ ರೀತಿಯ ಭದ್ರತಾ ಲೋಪ ಅಥವಾ ಕಾರ್ಯವಿಧಾನದಲ್ಲಿ ಉಲ್ಲಂಘನೆಗಳು ಕಂಡುಬಂದಲ್ಲಿ ತಕ್ಷಣವೇ ಅದನ್ನು ತಡೆದು, ಈ ಕುರಿತು ಸಂಬಂಧಪಟ್ಟ ಪ್ರಾಧಿಕಾರಕ್ಕೆ ತಕ್ಷಣ ವರದಿ ಮಾಡುವುದು, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವಂತೆ ಶುದ್ಧ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಸರಿಯಾದ ಬೆಳಕು ಹಾಗೂ ತರಗತಿಗಳಲ್ಲಿ ಗಡಿಯಾರ ಸೇರಿ ಮೂಲಭೂತ ಸೌಕರ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಸೂಚನೆ ನೀಡಿದರು.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲ 200 ಮೀಟರ್ ನಿಷೇಧಿತ ಪ್ರದೇಶ:
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023ರ ಕಲಂ 163 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಪರೀಕ್ಷಾ ದಿನದಂದು ದಾವಣಗೆರೆ ನಗರದ ನಿಗದಿತ 19 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳು (Xerox Shops) ಹಾಗೂ ಸೈಬರ್ ಕೆಫೆಗಳನ್ನು ಕಡ್ಡಾಯವಾಗಿ ಮುಚ್ಚತಕ್ಕದ್ದು. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಲೂ ಸೂಕ್ತ ಭದ್ರತೆ ಒದಗಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ನಿರ್ದೇಶನ ನೀಡಲಾಗಿದೆ ಎಂದರು.
19 ಪರೀಕ್ಷಾ ಕೇಂದ್ರಗಳ ವಿವರಗಳು:
ಅಥಣಿ ಕಾಂಪೋಸಿಟ್ ಪದವಿ ಪೂರ್ವ ಕಾಲೇಜು, ಎಸ್.ಎಸ್. ಲೇಔಟ್, ದಾವಣಗೆರೆ, ಎಸ್.ಬಿ.ಸಿ. ಪ್ರಥಮ ದರ್ಜೆ ಕಾಲೇಜು, ಎಸ್.ಎಸ್. ಲೇಔಟ್, ದಾವಣಗೆರೆ , ಬಿ.ಎಸ್.ಸಿ. ಪ್ರಥಮ ದರ್ಜೆ ಕಾಲೇಜು, ಎಸ್.ಎಸ್. ಲೇಔಟ್, ದಾವಣಗೆರೆ , ಎಸ್.ಎಲ್. ಪದವಿ ಪೂರ್ವ ಕಾಲೇಜು, ನಿಜಲಿಂಗಪ್ಪ ಲೇಔಟ್, ದಾವಣಗೆರೆ , ಡಾ. ಎಸ್.ಎಸ್. ಪದವಿ ಪೂರ್ವ ಕಾಲೇಜು, ಎಸ್.ಎಸ್. ಲೇಔಟ್, ದಾವಣಗೆರೆ , ಬಾಪೂಜಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ, ದಾವಣಗೆರೆ , ಎ.ವಿ.ಕೆ. ಮಹಿಳಾ ಪದವಿ ಪೂರ್ವ ಕಾಲೇಜು, ಪಿ.ಜೆ. ಬಡಾವಣೆ, ದಾವಣಗೆರೆ , ರಾಜನಹಳ್ಳಿ ಸೀತಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಪಿ.ಜೆ. ಬಡಾವಣೆ, ದಾವಣಗೆರೆ , ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು (ಹೈಸ್ಕೂಲ್ ಮೈದಾನ), ಪಿ.ಜೆ. ಬಡಾವಣೆ, ದಾವಣಗೆರೆ , ಡಿ.ಆರ್.ಎಮ್. ಸೈನ್ಸ್ ಪದವಿ ಪೂರ್ವ ಕಾಲೇಜು, ಪಿ.ಜೆ. ಬಡಾವಣೆ, ದಾವಣಗೆರೆ , ಮೋತಿ ವೀರಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಪಿ.ಜೆ. ಬಡಾವಣೆ, ದಾವಣಗೆರೆ , ಎ.ಆರ್.ಜಿ. ಪದವಿ ಪೂರ್ವ ಕಲಾ ಮತ್ತು ವಾಣಿಜ್ಯ ಕಾಲೇಜು, ಪಿ.ಜೆ. ಬಡಾವಣೆ, ದಾವಣಗೆರೆ , ಶ್ರೀ ತರಳುಬಾಳು ಪದವಿ ಪೂರ್ವ ಕಾಲೇಜು, ಹಡದಿ ರಸ್ತೆ, ದಾವಣಗೆರೆ , ಶ್ರೀ ಸಿದ್ಧಗಂಗಾ ಪದವಿ ಪೂರ್ವ ಕಾಲೇಜು, ಸಿದ್ಧಲಿಂಗೇಶ್ವರ ನಗರ, ದಾವಣಗೆರೆ , ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಡೆಂಟಲ್ ಕಾಲೇಜು ರಸ್ತೆ, ದಾವಣಗೆರೆ , ಎಸ್.ಎ.ಜಿ.ಬಿ. ಪದವಿ ಪೂರ್ವ ಕಲಾ ಮತ್ತು ವಾಣಿಜ್ಯ ಕಾಲೇಜು, ಪಿ.ಜೆ. ಬಡಾವಣೆ, ದಾವಣಗೆರೆ , ಸೆಂಟ್ ಪಾಲ್ಸ್ ಪದವಿ ಪೂರ್ವ ಕಾಲೇಜು, ಪಿ.ಜೆ. ಬಡಾವಣೆ, ದಾವಣಗೆರೆ , ಮಗನೂರು ಬಸಪ್ಪ ಪದವಿ ಪೂರ್ವ ಕಾಲೇಜು, ವಿದ್ಯಾನಗರ, ದಾವಣಗೆರೆ , ಸೆಂಟ್ ಜಾನ್ಸ್ ಪದವಿ ಪೂರ್ವ ಕಾಲೇಜು, ಶಿವಕುಮಾರ ಸ್ವಾಮಿ ಲೇಔಟ್, ದಾವಣಗೆರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅವರು ಮಾತನಾಡಿ, ಒಟ್ಟು 11033 ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆಯುತ್ತಿದ್ದು, ಪರೀಕ್ಷಾ ಕೇಂದ್ರಗಳನ್ನು ಈಗಾಗಲೇ ಪರಿಶೀಲಿಸಲಾಗಿದೆ, ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಕ್ರಮ ನಡೆಯದಂತೆ ಕ್ರಮವಹಿಸಲು ಬೀಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ, ಪರೀಕ್ಷಾ ಅಕ್ರಮ ನಡೆಯುವುದು ಕಂಡು ಬಂದರೆ, ಅಂತವರ ವಿರುದ್ಧ 15 ಲಕ್ಷ ರೂ.ಗಳಿಂದ 1 ಕೋಟಿ ರೂ.ಗಳ ದಂಡ ಮತ್ತು 10 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ತಿಳಿಸಿದರು.
ಎಎಸ್ಪಿ ಪರಮೇಶ್ವರ ಹೆಗಡೆ , ಡಿವೈಎಸ್ಪಿ ಶರಣಬಸವೇಶ್ವರ, ಡಿಡಿಪಿಯು ಪಳನಿಸ್ವಾಮಿ ಹಾಗೂ ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
- 163ನೇ ಕಲಂ ನಿಷೇಧಾಜ್ಞೆ
- civil police constable exam
- cpc exam 2026
- cpc exam centers davanagere
- cpc exam rules and dress code
- Davanagere DC Gangadharaswamy
- DAVANAGERE NEWS
- Karnataka Police Recruitment
- section 163 davanagere
- ಕರ್ನಾಟಕ ಪೊಲೀಸ್ ನೇಮಕಾತಿ
- ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
- ಡ್ರೆಸ್ ಕೋಡ್ ನಿಯಮ
- ದಾವಣಗೆರೆ 19 ಪರೀಕ್ಷಾ ಕೇಂದ್ರಗಳು
- ದಾವಣಗೆರೆ ಸುದ್ದಿ
- ಪೊಲೀಸ್ ಪರೀಕ್ಷೆ ಭದ್ರತೆ
- ಸಿಪಿಸಿ ಪರೀಕ್ಷೆ 2026
- ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಅರ್ಜಿ





Leave a comment