Home ಕ್ರೈಂ ನ್ಯೂಸ್ ಪಹಲ್ಗಾಮ್ ನಂತೆ ಹೆಸರು ಕೇಳಿ ಕುಲ್ಗಾಂನಲ್ಲಿ ಉಗ್ರರ ಅಟ್ಟಹಾಸ: ಹಿಂದೂ ವಲಸೆ ಕಾರ್ಮಿಕರ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಪಹಲ್ಗಾಮ್ ನಂತೆ ಹೆಸರು ಕೇಳಿ ಕುಲ್ಗಾಂನಲ್ಲಿ ಉಗ್ರರ ಅಟ್ಟಹಾಸ: ಹಿಂದೂ ವಲಸೆ ಕಾರ್ಮಿಕರ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು!

Share
ಕುಲ್ಗಾಂ
Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಕಿಲಾಂ (Kilam) ಪ್ರದೇಶದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿರುವ ಗುಂಡಿನ ದಾಳಿಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ವರದಿಗಳ ಪ್ರಕಾರ, ಇಟ್ಟಿಗೆ ಭಟ್ಟಿಯಲ್ಲಿದ್ದ ಹಲವು ವಲಸೆ ಕಾರ್ಮಿಕರನ್ನು ತಡೆದು ನಿಲ್ಲಿಸಿದ ಉಗ್ರರು, ಅವರ ಹೆಸರು ಮತ್ತು ಗುರುತನ್ನು ಕೇಳಿದ್ದಾರೆ. ಬಳಿಕ ಹಿಂದೂ ಕಾರ್ಮಿಕರನ್ನು ಪ್ರತ್ಯೇಕಿಸಿ ಅವರ ಮೇಲೆ ನೇರವಾಗಿ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಗೊಳಗಾದ ಕಾರ್ಮಿಕರನ್ನು ಛತ್ತೀಸ್‌ಗಢ ಮೂಲದ ದೀಪಕ್ ಮತ್ತು ಭೂಪೇಂದ್ರ ಎಂದು ಗುರುತಿಸಲಾಗಿದೆ.

ಘಟನೆ ನಡೆದ ತಕ್ಷಣ ಸ್ಥಳಕ್ಕೆ ಧಾವಿಸಿರುವ ಭದ್ರತಾ ಪಡೆಗಳು ಇಡೀ ಕಿಲಾಂ ಪ್ರದೇಶವನ್ನು ಸುತ್ತುವರಿದಿದ್ದು, ದಾಳಿ ನಡೆಸಿ ಪರಾರಿಯಾಗಿರುವ ಉಗ್ರರಿಗಾಗಿ ತೀವ್ರ ಶೋಧ ಕಾರ್ಯಾಚರಣೆ (Cordon and Search Operation) ಆರಂಭಿಸಿವೆ. ಈ ದಾಳಿಯು ಪಹಲ್ಗಾಮ್ ಮಾದರಿಯಲ್ಲೇ ನಡೆದ ನಿಖರ ದಾಳಿಯಾಗಿದೆ ಎಂದು ಶಂಕಿಸಲಾಗಿದೆ.

Share

Leave a comment

Leave a Reply

Your email address will not be published. Required fields are marked *

Related Articles