ದಾವಣಗೆರೆ: ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ರೋಗಿಗಳ ಜೀವ ರಕ್ಷಕ ಆಕ್ಸಿಜನ್ ಪೈಪ್ಗಳು ಕಳುವಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶ ಮೂಡಿಸಿದೆ.
ಆಸ್ಪತ್ರೆಯಂತಹ ಸ್ಥಳದಲ್ಲಿ ನಡೆದಿರುವ ಈ ಕಳ್ಳತನ ಹಾಗೂ ಭದ್ರತಾ ಲೋಪವು ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ರೋಗಿಗಳ ಜೀವಕ್ಕೆ ನೇರ ಸಂಪರ್ಕ ಕಲ್ಪಿಸುವ ಆಕ್ಸಿಜನ್ ಸರಬರಾಜು ವ್ಯವಸ್ಥೆಯಲ್ಲೇ ಇಂತಹ ಕೃತ್ಯ ನಡೆದಿರುವುದು ಜಿಲ್ಲಾಸ್ಪತ್ರೆಯ ಭದ್ರತಾ ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳು
ಕಠಿಣ ಕ್ರಮ ಹಾಗೂ ಮುಂಜಾಗ್ರತೆ ವಹಿಸಬೇಕೆಂಬ ಒತ್ತಾಯ ಜೋರಾಗಿದೆ.
ಸಮಗ್ರ ತನಿಖೆ:
ಆಕ್ಸಿಜನ್ ಪೈಪ್ ಕಳ್ಳತನ ಪ್ರಕರಣದ ಕುರಿತು ತಕ್ಷಣವೇ ಪಾರದರ್ಶಕ ಹಾಗೂ ಉನ್ನತ ಮಟ್ಟದ ತನಿಖೆ ನಡೆಸಬೇಕು.
ಆರೋಪಿಗಳ ಬಂಧನ:
ಈ ಕೃತ್ಯದಲ್ಲಿ ಭಾಗಿಯಾಗಿರುವ ಕಳ್ಳರು ಹಾಗೂ ಅವರಿಗೆ ಸಹಕರಿಸಿದವರನ್ನು ಶೀಘ್ರವೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
ಕಟ್ಟುನಿಟ್ಟಿನ ಭದ್ರತೆ:
ಜಿಲ್ಲಾಸ್ಪತ್ರೆಯ ಆವರಣದಲ್ಲಿ ಸಿಸಿಟಿವಿ ಕ್ಯಾಮೆರಾಗಳ ಸಂಖ್ಯೆ ಹೆಚ್ಚಿಸಿ, ಭದ್ರತಾ ಸಿಬ್ಬಂದಿಯ ಮೇಲ್ವಿಚಾರಣೆಯನ್ನು ಬಲಪಡಿಸಬೇಕು.
ರಕ್ಷಣೆ ಮತ್ತು ಸುರಕ್ಷತೆ:
ರೋಗಿಗಳ ಜೀವ ಉಳಿಸುವ ಎಲ್ಲಾ ಮೂಲಸೌಕರ್ಯಗಳಿಗೆ ಸೂಕ್ತ ರಕ್ಷಣೆ ಒದಗಿಸಲು ತುರ್ತು ಕ್ರಮ ಕೈಗೊಳ್ಳಬೇಕು.
“ಆಕ್ಸಿಜನ್ ಸರಬರಾಜು ವ್ಯವಸ್ಥೆಯು ಜೀವ ರಕ್ಷಿಸುವ ಅತ್ಯಗತ್ಯ ಸೇವೆಯಾಗಿದೆ. ಇಂತಹ ಸ್ಥಳಗಳಲ್ಲಿ ಭದ್ರತಾ ಲೋಪ ಎಸಗುವುದನ್ನು ಎಂದಿಗೂ ಸಹಿಸಲು ಸಾಧ್ಯವಿಲ್ಲ” ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.






Leave a comment