Home ಕ್ರೈಂ ನ್ಯೂಸ್ ದಾವಣಗೆರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಗೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಜೀಪ್: ಸವಾರರಿಬ್ಬರಿಗೆ ಏನಾಯ್ತು? ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ದಾವಣಗೆರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಗೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಜೀಪ್: ಸವಾರರಿಬ್ಬರಿಗೆ ಏನಾಯ್ತು? ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!

Share
ದಾವಣಗೆರೆ
Share

ದಾವಣಗೆರೆ:ದಾವಣಗೆರೆ ತಾಲ್ಲೂಕಿನ ಹೆಬ್ಬಾಳ್ ಟೋಲ್ ಗೇಟ್ ಬಳಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಜೀಪ್ ಹಾಗೂ ಬೈಕ್ ನಡುವೆ ನಡೆದ ಡಿಕ್ಕಿಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಜೀಪ್ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ವಿಭಜಕಕ್ಕೆ (ಡಿವೈಡರ್) ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಡಿವೈಡರ್ ದಾಟಿ ಎದುರಿನ ಪಥಕ್ಕೆ ನುಗ್ಗಿದ ಜೀಪ್, ಚಿತ್ರದುರ್ಗದಿಂದ ದಾವಣಗೆರೆ ಕಡೆಗೆ ಹೋಗುತ್ತಿದ್ದ ಬೈಕ್‌ಗೆ ನೇರವಾಗಿ ಡಿಕ್ಕಿಯಾಗಿದೆ.

ಅಪಘಾತದ ಪರಿಣಾಮ ಬೈಕ್ ಸವಾರ ಸೇರಿದಂತೆ ಇಬ್ಬರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ, ಎನ್‌ಹೆಚ್‌ಎಐ ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ದಾವಣಗೆರೆಯ ಚಿಗಟೇರಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಸ್ತುತ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share

Leave a comment

Leave a Reply

Your email address will not be published. Required fields are marked *