ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆಯ ರಾಫ್ಟಿಂಗ್, ಕಾಯ್ಕಿಂಗ್ ಪ್ರಿಯರಿಗೆ ಸಿಹಿ ಸುದ್ದಿ…!

On: January 6, 2025 3:31 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:06-01-2025

ದಾವಣಗೆರೆ: ಬಹಳ ವರ್ಷಗಳ ತರುವಾಯ ದಾವಣಗೆರೆ ಜಿಲ್ಲೆಯಲ್ಲಿ ಯುಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ದಾವಣಗೆರೆ ನಗರದಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಈ ಸಂದರ್ಭದಲ್ಲಿ ಯುವಕರಿಗೆ ಜಲಸಾಹಸ ಕ್ರೀಡೆಗಳ ಬಗ್ಗೆ ಪರಿಚಯಿಸಬೇಕು ಎಂಬುದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಆಶಯವಾಗಿತ್ತು.

ಈ ಆಶಯಕ್ಕೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಒಲವು ತೋರಿದರು. ಈ ಹಿನ್ನಲೆಯಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಯುಕ್ತರಿಗೆ ಜಲಸಾಹಸ ಕ್ರೀಡೆಗಳನ್ನು ಆಯೋಜಿಸುವಂತೆ ಕೋರಲಾಗಿತ್ತು. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿ ಕಡಿಮೆ ಅವಧಿಯಲ್ಲಿ ಜನರಲ್ ತಿಮ್ಮಯ್ಯ ಜಲಸಾಹಸ ಅಕಾಡೆಮಿ ವತಿಯಿಂದ ಕುಂದವಾಡ ಕೆರೆಯಲ್ಲಿ ರಾಫ್ಟಿಂಗ್ ಹಾಗೂ ಕಾಯ್ಕಿಂಗ್ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ. ಇದಕ್ಕೆ ಯುವಕರಿಂದ ಉತ್ತಮ ಸ್ಪಂದನೆ ದೊರೆತ ಹಿನ್ನಲೆಯಲ್ಲಿ ಜ.8 ವರೆಗೆ ಕೊಂಡಜ್ಜಿ ಕೆರೆಯಲ್ಲಿ ರಾಫ್ಟಿಂಗ್ ವಿಸ್ತರಿಸಲಾಗಿದೆ.

ಜಿಲ್ಲೆಯ ಯುವಕರು ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಮಾಡಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಂಡು ಭಾಗವಹಿಸಬಹುದು. ಜ.7 ರಂದು ಕೊಂಡಜ್ಜಿ ಕೆರೆಯಲ್ಲಿ ರಾಫ್ಟಿಂಗ್ ಹಾಗೂ ಕಾಯ್ಕಿಂಗ್ ಇರಲಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಹೇಳಿದರು.

250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ:

ಕುಂದವಾಡ ಕೆರೆಯಲ್ಲಿ ಆಯೋಜಿಸಲಾಗಿರುವ ರಾಫ್ಟಿಂಗ್ ಹಾಗೂ ಕಾಯ್ಕಿಂಗ್ ನಲ್ಲಿ ವಿದ್ಯಾರ್ಥಿಗಳು ಹಾಗೂ ಯುವಕರಿಂದ ಉತ್ತಮ ಸ್ಪಂದನೆ ದೊರೆತಿದೆ. ವಿವಿಧ ಕಾಲೇಜುಗಳಿಂದ ಆಗಮಿಸಿದ ಸ್ಕೌಟ್ಸ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳು ಸೋಮವಾರ ಮುಂಜಾನೆಯಿಂದಲೇ ತಂಡ ತಂಡವಾಗಿ ಪಾಲ್ಗೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಲೈಫ್ ಜಾಕೇಟ್ ತೊಡುವುದು ಸೇರಿದಂತೆ ಎಲ್ಲ ಮುನ್ನಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸಿಕೊಡಲಾಗುತ್ತಿದೆ.

ಕಾರ್ಯಕ್ರಮದ ನಿಮಿತ್ತವಾಗಿ 10 ಸಿಂಗಲ್ ಸೀಟರ್ ಕಾಯ್ಕಿಂಗ್ ಬೋಟ್, 7 ಡಬಲ್ ಸೀಟರ್ ಕಾಯ್ಕಿಂಗ್ ಬೋಟ್, 2 ರಾಫ್ಟ್ ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ಲೈಫ್ ಜಾಕೆಟ್‍ಗಳನ್ನು ಇರಿಸಲಾಗಿದೆ. 7 ತರಬೇತುದಾರರು ಕಾರ್ಯನಿರ್ವಹಿಸುತ್ತಿದ್ದಾರೆ. ಸುಮಾರು 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ ಎಂದು ಜಲಸಾಹಸ ತರಬೇತುದಾರ ನಾನಾರಾವ್ ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಾದ ವಿಜೇತಾ ಹಾಗೂ ಸಂಗಿತಾ ಕುಂದಾವಡ ಕರೆಯಲ್ಲಿ ಕಾಯ್ಕಿಂಗ್ ಮಾಧ್ಯಮಗಳ ಮುಂದೆ ಸಂತಸ ವ್ಯಕ್ತಪಡಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಯುವತಿ

ದುರ್ಗಾಪುರ ಯುವತಿ ಮೇಲೆ ಅ*ತ್ಯಾಚಾರಕ್ಕೆ ಸಾಥ್ ಕೊಟ್ಟಿದ್ದ ಸಹಪಾಠಿ ಸೆರೆ: ಬಂಧಿತರ ಸಂಖ್ಯೆ 6ಕ್ಕೇರಿಕೆ, ಸ್ಫೋಟಕ ಮಾಹಿತಿ ಬಯಲಿಗೆ!

ಚನ್ನಗಿರಿ

ಚನ್ನಗಿರಿ ಪಟ್ಟಣ ಸಮೀಪದ ಜೆ. ಹೆಚ್. ಪಟೇಲ್ ನಗರದಲ್ಲಿ ರಾತ್ರಿ ವೇಳೆ ಎಸ್ಪಿ ಭೇಟಿ: ಮನೆ ಗೋಡೆ ಮೇಲೆ ಉಮಾ ಪ್ರಶಾಂತ್ ಸ್ಟಿಕ್ಕರ್ ಅಂಟಿಸಿದ್ಯಾಕೆ?

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ವ್ಯಾಪಾರಿ

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ

ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕಾರ್ಯಾಗಾರ

ತ್ಯಾಜ್ಯ

ನರಕ ಚರ್ತುದರ್ಶಿಯಂದು ಕಸ ಹೊರಗೆ ಎಸೆಯಬೇಡಿ, ಪ್ರತ್ಯೇಕವಾಗಿ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೆ ನೀಡಿ

Leave a Comment