ದಾವಣಗೆರೆ: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸಚಿವ ಸಂಪುಟದಲ್ಲಿ ದಾವಣಗೆರೆ ಜಿಲ್ಲೆಗೆ ಎರಡು ಸಚಿವ ಸ್ಥಾನ ನೀಡಿರುವುದು ಸಂತಸದ ವಿಚಾರ. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಎಸ್. ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಕೆ. ಎಸ್. ಬಸವಂತಪ್ಪರಿಗೆ ಸಚಿವ ಸ್ಥಾನ ನೀಡಿರುವುದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರು ಹೇಳಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಎರಡು ಸಚಿವ ಸ್ಥಾನ ನೀಡಿರುವುದರಿಂದ
ಅನುಕೂಲವಾಗುವುದು ಖಚಿತ. ನಾಲ್ಕು ಬಾರಿ ಸಚಿವರಾಗಿ ಅನುಭವ ಹೊಂದಿರುವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಹಾಗೂ ಜನಸೇವೆ ಮೂಲಕ ಜನಪ್ರಿಯತೆ ಗಳಿಸಿರುವ ಕೆ. ಎಸ್. ಬಸವಂತಪ್ಪರು ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸುತ್ತಾರೆಂಬ ವಿಶ್ವಾಸ ಇದೆ ಎಂದು ಹೇಳಿದ್ದಾರೆ.
ವಿಧಾನ ಪರಿಷತ್ತಿನ ಸಭಾಪತಿಗಳಾಗಿ ಸಲೀಂ ಅಹ್ಮದ್ ಅವರನ್ನು ನೇಮಕ ಮಾಡಲಾಗಿದೆ. ಕಳೆದ 40 ವರ್ಷಗಳಿಂದ ಪಕ್ಷಕ್ಕಾಗಿ ಹಗಲಿರುಳು ದುಡಿದಿರುವ ಹಾಗೂ ಪಕ್ಷ ನಿಷ್ಠೆ ಹೊಂದಿರುವ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡಬೇಕಾಗಿತ್ತು. ಸಲೀಂ
ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡಿದ್ದರೆ ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಗೆ ಮತ್ತಷ್ಟು ಶಕ್ತಿ ಬರುತಿತ್ತು. ಆದರೆ ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಿದ್ದೇವೆ. ಮುಂಬರುವ ದಿನಗಳಲ್ಲಿ ಈ ಭಾಗಕ್ಕೆ ಆದ್ಯತೆ ನೀಡಬೇಕಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬ ನಂಬಿಕೆ ಇದೆ ಎಂದು ಸೈಯದ್ ಖಾಲಿದ್ ಅಹ್ಮದ್ ಅವರು ತಿಳಿಸಿದ್ದಾರೆ.
- Davanagere North
- Davanagere Politics
- Karnataka Cabinet Ministers
- Karnataka Congress News
- KS Basavantappa
- Mayakonda Constituency
- Saleem Ahmed
- SS Mallikarjun
- Syed Khalid Ahmed
- ಎಸ್. ಎಸ್. ಮಲ್ಲಿಕಾರ್ಜುನ್
- ಕರ್ನಾಟಕ ಸಚಿವ ಸಂಪುಟ
- ಕಾಂಗ್ರೆಸ್ ಪಕ್ಷ
- ಕೆ ಎಸ್ ಬಸವಂತಪ್ಪ
- ದಾವಣಗೆರೆ ಉತ್ತರ
- ದಾವಣಗೆರೆ ರಾಜಕೀಯ
- ಮಾಯಕೊಂಡ ವಿಧಾನಸಭಾ ಕ್ಷೇತ್ರ
- ಸಲೀಂ ಅಹ್ಮದ್
- ಸೈಯದ್ ಖಾಲಿದ್ ಅಹ್ಮದ್






Leave a comment