ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕಳಪೆ ಕಾಮಗಾರಿ ಮಾಡಿದ್ರೆ ಹುಷಾರ್, ಗುಣಮಟ್ಟದ ಕಾಮಗಾರಿ ಆಗ್ಬೇಕು: ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಕಟ್ಟಪ್ಪಣೆ!

On: January 7, 2025 9:54 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:07-01-2025

ದಾವಣಗೆರೆ: ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ದೊಡ್ಡಬೂದಿಹಾಳ್ ಗ್ರಾಮದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯದ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ಹಾಗೂ ಬಿ,ಕಲಪನಹಳ್ಳಿ ಗ್ರಾಮದಲ್ಲಿ ರಾಜಕಾಲುವೆಯ ಹಳ್ಳಕ್ಕೆ ತಡೆಗೋಡೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಬಡವರ ಪಕ್ಷವೆಂದರೇ ಅದು ಕಾಂಗ್ರೆಸ್ ಪಕ್ಷ, ಉಪಯುಕ್ತ ಐದು ಗ್ಯಾರೆಂಟಿಗಳನ್ನು ತಂದು ನುಡಿದಂತೆ ನಡೆದಿದ್ದೇವೆ. ಜಿಲ್ಲೆಯಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ನಡೆಸಲು ಕಾಂಗ್ರೆಸ್ ಪಕ್ಷವು ಮುಂದಾಗಿದೆ. ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಿಗಳಲ್ಲಿರುವ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವು ಮಾಡಲಾಗುತ್ತಿದೆ ಎಂದರು.

ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೂ ವಸತಿ ವ್ಯವಸ್ಥೆ ಲಭಿಸುವ ಹಿನ್ನಲೆ ದೊಡ್ಡಬೂದಿಹಾಳ್ ಗ್ರಾಮದಲ್ಲಿ ವಿದ್ಯಾರ್ಥಿ‌ನಿಲಯಗಳ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಅಪಘಾತಗಳನ್ನು ತಪ್ಪಿಸಲು ಬಿ. ಕಲಪನಹಳ್ಳಿ ಗ್ರಾಮದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಗುತ್ತಿಗೆದಾರರು ಉತ್ತಮ ಕಾಮಗಾರಿ ನಿರ್ಮಾಣ ಮಾಡಬೇಕು ಹಾಗೂ ಇಂಜಿನಿಯರ್ ಗಳ ಕಳಪೆ ಕಾಮಗಾರಿಯಾಗದಂತೆ ಜಾಗೃತಿ ವಹಿಸುವಂತೆ ಸಚಿವರು ಸೂಚಿಸಿದರು.

ಈ ಸಂದರ್ಭದಲ್ಲಿ ಮೇಯರ್ ಕೆ.ಚಮನ್ ಸಾಬ್, ಉಪ‌ಮೇಯರ್ ಸೋಗಿ ಶಾಂತಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರು ಗಿರೀಶ್, ಮಾಗನಹಳ್ಳಿ ಪರಶುರಾಮ್, ಬೂದಾಳ್ ಬಾಬು, ಲಿಂಗಾರಾಜ್ ಸ್ಥಳೀಯ ಮುಖಂಡರುಗಳು ಇದ್ದರು.

 

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment