SUDDIKSHANA KANNADA NEWS/ DAVANAGERE/ DATE:08-01-2025
ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನಲ್ಲಿ ಪಂಚಪೀಠದ ಮೂವರು ಶ್ರೀಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಕಾಶಿ ಪೀಠದ ಶ್ರೀ ಶ್ರೀ ಶ್ರೀ 1008 ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು, ಶ್ರೀ ಶೈಲ ಜಗದ್ಗುರು ಪೀಠದ ಶ್ರೀ ಶ್ರೀ ಶ್ರೀ 1008 ಶ್ರೀಶೈಲ ಜಗದ್ಗುರು ಚನ್ನಬಸವ ಸಿದ್ದರಾಮ ಶಿವಾಚಾರ್ಯ ಸ್ವಾಮೀಜಿ, ಉಜ್ಜಯಿನಿ ಪೀಠದ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ಧಲಿಂಗ ರಾಜ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮೀಜಿ ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿ ಅರೋಗ್ಯ ಕುಶಲೋಪರಿ ವಿಚಾರಿಸಿ, ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಶಾಮನೂರು ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.