SUDDIKSHANA KANNADA NEWS/ DAVANAGERE/ DATE:08-01-2025
ಬೆಂಗಳೂರು: ಶಾಂತಿಯುತವಾಗಿ ಹೋರಾಟ ನಡೆಸಲು ಪ್ರಜಾಪ್ರಭುತ್ವದಲ್ಲಿ ಅವಕಾಶವಿದೆ. ಸರ್ಕಾರ ಇದನ್ನು ವಿರೋಧಿಸುವುದಿಲ್ಲ. ಆದರೆ ಕಾನೂನು ಕೈಗೆತ್ತಿಕೊಂಡರೆ ಸರ್ಕಾರ ಸುಮ್ಮನಿರಲ್ಲ ಎಂದು ಶರಣಾಗತಿ ಆದ ಮಾಜಿ ನಕ್ಸಲರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ನಕ್ಸಲರು ಶರಣಾಗತಿ ಆದ ಬಳಿಕ ಮಾತನಾಡಿದ ಅವರು, ಅನ್ಯಾಯ ಕಡಿಮೆ ಮಾಡಲು ನಮ್ಮ ಸರ್ಕಾರ ಬಹಳ ಪ್ರಯತ್ನ ಮಾಡುತ್ತಿದೆ. ಯಾರ ಮೇಲೆಯೂ ಅನ್ಯಾಯ ಆಗಬಾರದು ಎಂಬುವುದು ನಮ್ಮ ಧ್ಯೇಯ ಎಂದು ಹೇಳಿದರು.
ಬಡವರ ಹಕ್ಕುಗಳ ರಕ್ಷಣೆಗಾಗಿ ಅವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬರಲು ಅನೇಕ ಕಾರ್ಯಕ್ರಮ ಜಾರಿ ಮಾಡಿದೆ. ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ ಯೋಜನೆ ಉದ್ದೇಶ ಇದೇ ಆಗಿದೆ. ಗೌರವಯುತವಾಗಿ ಬಡವರು ಬದುಕಲು ಅವಕಾಶ ಇದರಿಂದ ಸಿಗಲಿದೆ. ಬಡವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಬದುಕಲು ಶಕ್ತಿ ಬಂದರೆ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದು ಪ್ರತಿಪಾದಿಸಿದರು.
ನಕ್ಸಲಿಸಂ ರಹಿತವಾದ ಮುಕ್ತವಾದ ಸಮಾಜ ನಮ್ಮ ಗುರಿ. ಈ ಹಿನ್ನೆಲೆಯಲ್ಲಿ ಮುಖ್ಯವಾಹಿನಿಗೆ ಬರುವ ನಕ್ಸಲಿಯರಿಗೆ ಎಲ್ಲಾ ರೀತಿಯ ನೆರವು ಬಹಿರಂಗವಾಗಿ ಹೇಳಿದ್ದೆ. ನಿಮ್ಮನ್ನು ಕ್ರಿಮಿನಲ್ಗಳ ರೀತಿ ನೋಡದೆ, ಮಾನವರಂತೆ ನೋಡುವ ಭರವಸೆ ನೀಡಿದ್ದೆ. ಈ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.