Home ಉದ್ಯೋಗ ವಾರ್ತೆ ಇಂದು ಮತ್ತು ನಾಳೆ ನಡೆಯಬೇಕಿದ್ದ ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ಏಕಾಏಕಿ ರದ್ದು: ಕೆಇಎ ಮಹತ್ವದ ಆದೇಶ ಹೊರಡಿಸಿದ್ಯಾಕೆ?
ಉದ್ಯೋಗ ವಾರ್ತೆದಾವಣಗೆರೆಬೆಂಗಳೂರು

ಇಂದು ಮತ್ತು ನಾಳೆ ನಡೆಯಬೇಕಿದ್ದ ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ಏಕಾಏಕಿ ರದ್ದು: ಕೆಇಎ ಮಹತ್ವದ ಆದೇಶ ಹೊರಡಿಸಿದ್ಯಾಕೆ?

Share
ಕೃಷಿ
Share

ಇಂದು  ಮತ್ತು 9ರ ನಾಳೆ ನಡೆಯಬೇಕಿದ್ದ ಕೃಷಿ ಅಧಿಕಾರಿ (AO) ಹಾಗೂ ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ರದ್ದುಗೊಳಿಸಿದೆ. ವಿದ್ಯಾರ್ಹತೆ ನಿಯಮಾವಳಿ ಬದಲಾವಣೆ ಖಂಡಿಸಿ ಕೃಷಿ ಪದವೀಧರರು ನಡೆಸಿದ ಬೃಹತ್ ಪ್ರತಿಭಟನೆಗೆ ಸ್ಪಂದಿಸಿ ಸರ್ಕಾರ ಈ ನಿರ್ಧಾರ ತಳೆದಿದೆ.

ಬೆಂಗಳೂರು: ರಾಜ್ಯ ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಆಗಸ್ಟ್ 8 ಹಾಗೂ 9 ರಂದು ನಿಗದಿಯಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ರದ್ದತಿಗೆ ಪ್ರಮುಖ ಕಾರಣವೇನು?

ಅರ್ಹತೆ ಕುರಿತು ವಿರೋಧ: ಕೃಷಿ ಅಧಿಕಾರಿ ಹುದ್ದೆಗಳಿಗೆ ಬಿಇ ಮತ್ತು ಬಿ.ಟೆಕ್ (B.E / B.Tech) ಪದವೀಧರರಿಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವುದನ್ನು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ (GKVK) ವಿದ್ಯಾರ್ಥಿಗಳು ತೀವ್ರವಾಗಿ ವಿರೋಧಿಸಿದ್ದರು.

ವಿದ್ಯಾರ್ಥಿಗಳ ಪ್ರತಿಭಟನೆ: ಕೃಷಿ ಪದವಿ (B.Sc Agriculture) ಪಡೆದ ಅಭ್ಯರ್ಥಿಗಳಿಗೆ ಮಾತ್ರ ಆದ್ಯತೆ ನೀಡಬೇಕೆಂದು ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿದ್ದವು.

ಸಿಎಂ ಗಮನಕ್ಕೆ ತಂದಿದ್ದ ನಿಯೋಗ: ಆಗಸ್ಟ್ 4 ರಂದು ಕೃಷಿ ವಿದ್ಯಾರ್ಥಿಗಳ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿತ್ತು. ಸಮಸ್ಯೆಯನ್ನು ಸೂಕ್ಷ್ಮವಾಗಿ ಪರಿಶೀಲಿಸುವುದಾಗಿ ಸಿಎಂ ನೀಡಿದ್ದ ಭರವಸೆಯಂತೆ ಇದೀಗ ಪರೀಕ್ಷೆಯನ್ನು ಮುಂದೂಡಲಾಗಿದೆ.

ಒಟ್ಟು 18,299ಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದು, ಪರಿಷ್ಕೃತ ವೇಳಾಪಟ್ಟಿ ಹಾಗೂ ಅರ್ಹತಾ ಮಾನದಂಡಗಳ ಕುರಿತು ಶೀಘ್ರದಲ್ಲೇ ಅಧಿಕೃತ ಮಾಹಿತಿ ಹೊರಬೀಳಲಿದೆ.

Share

Leave a comment

Leave a Reply

Your email address will not be published. Required fields are marked *