SUDDIKSHANA KANNADA NEWS/ DAVANAGERE/ DATE:11-01-2025
ಮಂಗಳೂರು: ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳುವ ಮೂಲಕ ಮುಖ್ಯಮಂತ್ರಿ ಬದಲಾವಣೆ ವಿಚಾರ ಭುಗಿಲೇಳುತ್ತಿದ್ದಂತೆ ಹೇಳಿರುವುದು ಕುತೂಹಲ ಕೆರಳಿಸಿದೆ.
ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್ ಅವರು ಸ್ಪೀಕರ್ ಆಗುವ ಮೂಲಕ ಪ್ರೋಟೋಕಾಲ್ ಪ್ರಕಾರ ನನಗಿಂತ ಎತ್ತರದಲ್ಲಿದ್ದಾರೆ. ಮುಂದೆ ಇದಕ್ಕಿಂತ ಒಳ್ಳೆಯ ಅವಕಾಶಗಳು ಸಿಗಬಹುದು. ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ ಎಂದರು.
ಯು.ಟಿ.ಖಾದರ್ ಅವರು ಸ್ಪೀಕರ್ ಆದ ಬಳಿಕ ತಮ್ಮ ಕ್ಷೇತ್ರದ ಅಭಿವೃದ್ಧಿಗೆ 1000 ಕೋಟಿಯಷ್ಟು ಅನುದಾನ ತಂದಿದ್ದಾರೆ. ಕ್ಷೇತ್ರದ ಬಗ್ಗೆ ಅಷ್ಟೊಂದು ಪ್ರೀತಿ ಇದೆ ಖಾದರ್ ಅವರಿಗೆ ಎಂದರು.
ತುಳು ಎರಡನೇ ಭಾಷೆ: ಸರ್ಕಾರ ಪರಿಗಣಿಸುತ್ತದೆ:
ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರ ಬೇಡಿಕೆಯಂತೆ ತುಳು ಭಾಷೆಯನ್ನು ಎರಡನೇ ರಾಜ್ಯ ಭಾಷೆಯನ್ನಾಗಿ ಪರಿಗಣಿಸುವ ಬಗ್ಗೆ ಗಂಭೀರವಾಗಿ ಚಿಂತಿಸಲಾಗುವುದು ಎಂದರು.
ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವ ರಹೀಂ ಖಾನ್ ಸೇರಿ ಹಲವು ಪ್ರಮುಖರು, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.