SUDDIKSHANA KANNADA NEWS/ DAVANAGERE/ DATE:15-01-2025
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಾಸ್ಯನಟ ಸರಿಗಮ ವಿಜಿ ಅವರು ನಿಧನ ಹೊಂದಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅವರಿಗೆ 76 ವರ್ಷ ವಯಸ್ಸಾಗಿತ್ತು. ಐದು ದಶಕಗಳಿಂದ ಸಿನಿಮಾ ರಂಗದಲ್ಲಿದ್ದರು. ಸ್ಯಾಂಡಲ್ ವುಡ್ ನ ಹಿರಿಯ ನಟ ಅಪಾರ ಅಭಿಮಾನಿಗಳು, ಬಂಧುಬಳಗದವರನ್ನು ಅಗಲಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 269 ಚಿತ್ರಗಳಲ್ಲಿ ನಟಿಸಿದ್ದ ಅವರು 80 ಚಿತ್ರಗಳಿಗೆ ಅಸಿಸ್ಟೆಂಡ್ ಡೈರೆಕ್ಟರ್ ಆಗಿಯೂ ಕಾರ್ಯ ನಿರ್ವಹಿಸಿದ್ದರು. ಸಂಸಾರದಲ್ಲಿ ಸರಿಗಮ ನಾಟಕವನ್ನು ನಿರ್ದೇಶಿಸಿ ಯಶಸ್ವಿಯಾಗಿದ್ದರು.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಅಂತಿಮ ದರ್ಶನಕ್ಕೆ ಇಂದು ಮಧ್ಯಾಹ್ನ 1.30ರಿಂದ ವ್ಯವಸ್ಥೆ ಮಾಡಲಾಗಿದೆ. ನಾಳೆ ಟಿ ಆರ್ ಮಿಲ್ ನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ರಂಗಭೂಮಿ, ಕಿರುತೆರೆ, ಬೆಳ್ಳಿತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಹಾಸ್ಯಕಲಾವಿದರಾಗಿಯೂ ಜನರನ್ನು ರಂಜಿಸಿದ್ದರು.