Home ದಾವಣಗೆರೆ ದಾವಣಗೆರೆಯ ಹೆಬ್ಬಾಳ್ ಟೋಲ್ ಗೇಟ್ ಬಳಿ ಭೀಕರ ಅಪಘಾತ: ನಿಂತಿದ್ದ ಕಾರಿಗೆ ಹಿಂಬದಿಯಿಂದ ಗುದ್ದಿದ ಟ್ರಕ್! ಮುಂದೇನಾಯ್ತು?
ದಾವಣಗೆರೆಕ್ರೈಂ ನ್ಯೂಸ್ಬೆಂಗಳೂರು

ದಾವಣಗೆರೆಯ ಹೆಬ್ಬಾಳ್ ಟೋಲ್ ಗೇಟ್ ಬಳಿ ಭೀಕರ ಅಪಘಾತ: ನಿಂತಿದ್ದ ಕಾರಿಗೆ ಹಿಂಬದಿಯಿಂದ ಗುದ್ದಿದ ಟ್ರಕ್! ಮುಂದೇನಾಯ್ತು?

Share
ದಾವಣಗೆರೆ
Share

ದಾವಣಗೆರೆ: ಜಿಲ್ಲೆಯ ದಾವಣಗೆರೆ ತಾಲೂಕಿನ ಹೆಬ್ಬಾಳ್ ಟೋಲ್ ಗೇಟ್‌ನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ.

ಟೋಲ್ ಬೂತ್‌ನಲ್ಲಿ ಸಾಲಿನಲ್ಲಿ ನಿಂತಿದ್ದ ಕಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಟ್ರಕ್ ಲಾರಿಯೊಂದು ಭೀಕರವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಜಖಂಗೊಂಡಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಹಾಗೂ ಚಾಲಕ ಯಾವುದೇ ಪ್ರಾಣಪಾಯವಿಲ್ಲದೆ ಪವಾಡಸದೃಶವಾಗಿ ಪಾರಾಗಿದ್ದಾರೆ.

ಬೆಳಗಿನ ಜಾವ ನಡೆದ ಈ ಭೀಕರ ಅಪಘಾತದ ದೃಶ್ಯಗಳು ಟೋಲ್ ಗೇಟ್‌ನ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Share

Leave a comment

Leave a Reply

Your email address will not be published. Required fields are marked *

Related Articles