Home ದಾವಣಗೆರೆ ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ವಿಜಯ್ ನಿರ್ಣಯ: 543 ಸೀಟುಗಳಲ್ಲೇ ಶೇ. 33ರಷ್ಟು ಮಹಿಳಾ ಮೀಸಲಾತಿಗೆ ಆಗ್ರಹ
ದಾವಣಗೆರೆಕ್ರೈಂ ನ್ಯೂಸ್ನವದೆಹಲಿಬೆಂಗಳೂರು

ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ವಿಜಯ್ ನಿರ್ಣಯ: 543 ಸೀಟುಗಳಲ್ಲೇ ಶೇ. 33ರಷ್ಟು ಮಹಿಳಾ ಮೀಸಲಾತಿಗೆ ಆಗ್ರಹ

Share
ವಿಜಯ್
Share

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಬುಧವಾರ ರಾಜ್ಯ ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ (Delimitation) ಪ್ರಕ್ರಿಯೆಯ ವಿರುದ್ಧ ನಿರ್ಣಯವನ್ನು ಮಂಡಿಸಿದ್ದಾರೆ.

ಜನಸಂಖ್ಯೆ ಆಧಾರಿತ ಪುನರ್ವಿಂಗಡಣೆಯಿಂದಾಗಿ ದಕ್ಷಿಣ ಭಾರತದ ರಾಜ್ಯಗಳು, ವಿಶೇಶವಾಗಿ ತಮಿಳುನಾಡು, ಸಂಸತ್ತಿನಲ್ಲಿ ತಮ್ಮ ರಾಜಕೀಯ ಪ್ರಾತಿನಿಧ್ಯವನ್ನು ಕಳೆದುಕೊಳ್ಳಲಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಅದೇ ಸಮಯದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸಿದ ಮುಖ್ಯಮಂತ್ರಿ ವಿಜಯ್, ಪ್ರಸ್ತುತ ಇರುವ 543 ಲೋಕಸಭಾ ಕ್ಷೇತ್ರಗಳ ಮಿತಿಯನ್ನೇ ಕಾಯ್ದುಕೊಂಡು, ಅದರೊಳಗೇ ಶೇ. 33ರಷ್ಟು ಮಹಿಳಾ ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತರಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *