SUDDIKSHANA KANNADA NEWS/ DAVANAGERE/ DATE:16-01-2025
ದಾವಣಗೆರೆ: ಶಕ್ತಿ ಯೋಜನೆಯಡಿ ದಾವಣಗೆರೆ ವಿಭಾಗದ ವ್ಯಾಪ್ತಿಯಲ್ಲಿ ಡಿಸೆಂಬರ್ ಅಂತ್ಯದವರೆಗೆ 67,75,1001 ಟ್ರಿಪ್ಗಳಲ್ಲಿ ಮಹಿಳೆಯರು ಪ್ರಯಾಣಿಸಿದ್ದು ಇದರ ವೆಚ್ಚವಾಗಿ ರೂ.189,13,62,548 ರೂ.ಗಳನ್ನು ಸರ್ಕಾರದಿಂದ ಭರಿಸಲಾಗಿದೆ.
ಗೃಹಜ್ಯೋತಿ: ದಾವಣಗೆರೆ ಮತ್ತು ಹರಿಹರ ವಿಭಾಗದಿಂದ ಒಟ್ಟು 556624 ವಿದ್ಯುತ್ ಸಂಪರ್ಕ ಪಡೆದ ಆರ್.ಆರ್.ಸಂಖ್ಯೆಗಳಿದ್ದು ಇದರಲ್ಲಿ 502344 ಆರ್.ಆರ್.ಸಂಖ್ಯೆಯ ಫಲಾನುಭವಿಗಳು ಗೃಹಜ್ಯೋತಿಯಡಿ ನೊಂದಣಿಯಾಗಿದ್ದು ಇದರ ವೆಚ್ಚವಾಗಿ ಡಿಸೆಂಬರ್ ತಿಂಗಳಲ್ಲಿ ರೂ.21 ಕೋಟಿ ವೆಚ್ಚವನ್ನು ಹೊಂದಾಣಿಕೆ ಮಾಡಲಾಗಿದೆ.
ಗೃಹಲಕ್ಷ್ಮಿ:
ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಯರಿಗೆ ಪ್ರತಿ ತಿಂಗಳು 2 ಸಾವಿರ ರೂ.ಗಳನ್ನು ನೀಡುತ್ತಿದ್ದು ಅಕ್ಟೋಬರ್ ಅಂತ್ಯದವರೆಗೆ 360849 ಮಹಿಳೆಯರಿಗೆ ಆರಂಭದಿಂದ ಇಲ್ಲಿಯವರೆಗೆ ರೂ.501.72 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ.
ಅನ್ನಭಾಗ್ಯ:
ಅನ್ಯಭಾಗ್ಯ ಯೋಜನೆಯಡಿ ಪ್ರತಿ ಕುಟುಂಬದ ಸದಸ್ಯರಿಗೆ ತಿಂಗಳಿಗೆ 10 ಕೆ.ಜಿ.ಅಕ್ಕಿ ನೀಡುತ್ತಿದ್ದು ಇದರಲ್ಲಿ 5 ಕೆ.ಜಿ.ಅಕ್ಕಿ ನೀಡಿ ಉಳಿದ 5 ಕೆಜಿಯ ಮೊತ್ತವನ್ನು ಅವರ ಖಾತೆಗೆ ಜಮಾ ಮಾಡಲಾಗುತ್ತಿದೆ.
ಸೆಪ್ಟೆಂಬರ್ ಅಂತ್ಯದವರೆಗೆ 342968 ಕಾರ್ಡ್ದಾರರಲ್ಲಿನ 1229893 ಸದಸ್ಯರಿಗೆ ಯೋಜನೆ ಆರಂಭವಾದಾಗಿನಿಂದ ರೂ.286.66 ಕೋಟಿಯನ್ನು ಡಿಬಿಟಿ ಮೂಲಕ ಅವರ ಖಾತೆಗೆ ವರ್ಗಾಯಿಸಲಾಗಿದೆ.
ಯುವನಿಧಿ:
ಯುವನಿಧಿ ಯೋಜನೆಯಡಿ ಪದವಿ ಉತ್ತೀರ್ಣರಾದ ಹಾಗೂ ಡಿಪ್ಲೊಮಾ ಪಾಸಾದವರಿಗೆ ಶಿಷ್ಯವೇತನವಾಗಿ ಪ್ರತಿ ತಿಂಗಳು ಪದವೀಧರರಿಗೆ ರೂ.3000 ಮತ್ತು ಡಿಪ್ಲೊಮಾದಾರರಿಗೆ ರೂ.1500 ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 2023 ರಲ್ಲಿ ಉತ್ತೀರ್ಣರಾದ 5802 ಅಭ್ಯರ್ಥಿಗಳಿಗೆ ರೂ.8,46,8700 ರೂ.ಗಳನ್ನು ಶಿಷ್ಯವೇತನವಾಗಿ ಅವರ ಖಾತೆಗೆ ಜಮಾ ಮಾಡಲಾಗಿದೆ.
ಪೋಸ್ಟರ್ ಬಿಡುಗಡೆ; 2024 ನೇ ಸಾಲಿನಲ್ಲಿ ಉತ್ತೀರ್ಣರಾದ ಪದವೀಧರರಿಗೆ ಹಾಗೂ ಡಿಪ್ಲೊಮಾ ಪಾಸಾದವರು ಯುವನಿಧಿಯಡಿ ನೊಂದಣಿ ಮಾಡಲು ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಗ್ಯಾರಂಟಿಗಳು ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಾಗಿದ್ದು ಎಲ್ಲಾ ಇಲಾಖೆ ಅಧಿಕಾರಿಗಳು ಶೇ 100 ರಷ್ಟು ಸಾಧನೆ ಮಾಡಬೇಕು. ಯಾರಿಗಾದರೂ ಡಿಬಿಟಿ ಸೇರಿದಂತೆ ಇನ್ನಿತರೆ ಸಮಸ್ಯೆಯಾದಲ್ಲಿ ಅವರ ದಾಖಲೆಗಳನ್ನು ಸರಿಪಡಿಸುವ ಕೆಲಸ ಮಾಡುವಂತೆ ಸೂಚಿಸಲಾಗಿದೆ.