Home ದಾವಣಗೆರೆ ಕಾವೇರಿ ನೀರು ತಮಿಳುನಾಡಿಗೆ ಬಿಡುಗಡೆ ವಿರೋಧಿಸಿ ದಾವಣಗೆರೆಯಲ್ಲಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ
ದಾವಣಗೆರೆನವದೆಹಲಿಬೆಂಗಳೂರು

ಕಾವೇರಿ ನೀರು ತಮಿಳುನಾಡಿಗೆ ಬಿಡುಗಡೆ ವಿರೋಧಿಸಿ ದಾವಣಗೆರೆಯಲ್ಲಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

Share
ಕಾವೇರಿ
Share

ದಾವಣಗೆರೆ: ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ದಿನನಿತ್ಯ 12,000 ಕ್ಯೂಸೆಕ್ಸ್ ನೀರು ಬಿಡುವಂತೆ ನೀಡಿರುವ ಆದೇಶವನ್ನು ಖಂಡಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ವೇದಿಕೆ ರಾಜ್ಯಾಧ್ಯಕ್ಷ ಕೆ. ಜಿ. ಯಲ್ಲಪ್ಪ ಅವರು, ರಾಜ್ಯದಲ್ಲಿ ಮುಂಗಾರು ಮಳೆ ಅಭಾವದಿಂದಾಗಿ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಮಟ್ಟ ಭಾರಿ ಕುಸಿದಿದೆ. ಈ ಸಂದರ್ಭದಲ್ಲಿ ತಮಿಳುನಾಡಿಗೆ 15 ದಿನಗಳ ಕಾಲ ನೀರು ಹರಿಸಿದರೆ ಮುಂದಿನ ಬೇಸಿಗೆಯಲ್ಲಿ ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿಗೂ ಭಾರಿ ಅಭಾವ ಎದುರಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ನಮ್ಮ ರಾಜ್ಯದ ಬರ ಪರಿಸ್ಥಿತಿಯನ್ನು ಪರಿಗಣಿಸದೆ ಪ್ರಾಧಿಕಾರಗಳು ನೀಡಿರುವ ಈ ಆದೇಶವು ಕನ್ನಡಿಗರಿಗೆ ಮಾಡಿದ ಅನ್ಯಾಯವಾಗಿದೆ. ಆದ್ದರಿಂದ ಕರ್ನಾಟಕ ಸರ್ಕಾರವು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರನ್ನು ಬಿಡುಗಡೆ ಮಾಡಬಾರದು ಎಂದು ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದ್ದು, ನೀರು ಬಿಟ್ಟಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಬಾಬುರಾವ್, ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಜಮ್ ರಜ್ವಿ, ಉತ್ತರವಲಯ ನಗರಾಧ್ಯಕ್ಷ ಎಸ್., ವಾಹನ ಚಾಲಕರ ಸಂಘದ ಜಿಲ್ಲಾಧ್ಯಕ್ಷ ಇಸ್ಮಾಯಿಲ್ ಜಬೀವುಲ್ಲಾ, ಮಂಜುನಾಥ್ ಶೆಟ್ಟಿ, ಗದಿಗೆಪ್ಪ, ಸೈಯದ್ ಶಾಬಾಜ್,
ಗಿರೀಶ್ ನವಲೆ ಮತ್ತಿತರರು ಪಾಲ್ಗೊಂಡಿದ್ದರು.

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles