SUDDIKSHANA KANNADA NEWS/ DAVANAGERE/ DATE:17-01-2025
ದಾವಣಗೆರೆ: ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಮಹಾಸ್ವಾಮಿಗಳು ಹಾಗೂ ಶ್ರೀ ನಿಡುಮಾಮಿಡಿ ಜಗದ್ಗುರು ಮಠ, ಗೂಳೂರು ಮಹಾ ಸಂಸ್ಥಾನದ ಪರಮಪೂಜ್ಯ ಶ್ರೀ ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಸ್ವಾಮೀಜಿಗಳು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟೀಯ ಅಧ್ಯಕ್ಷ ಹಾಗೂ ದಾವಣಗೆರೆ ದಕ್ಷಿಣ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಮಾಡಿದರು.
ಬೆಂಗಳೂರಿನ ನಿವಾಸದಲ್ಲಿ ಶಾಸಕರ ಆರೋಗ್ಯವನ್ನು ವಿಚಾರಿಸಿ ಕುಶಲೋಪರಿ ನಡೆಸಿದರು.
ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಯುವ ನಾಯಕರಾದ ಸಮರ್ಥ್ ಶಾಮನೂರು, ಶಿವ ಶಾಮನೂರು ಹಾಗೂ ಇತರರು ಉಪಸ್ಥಿತರಿದ್ದರು.