ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡಿದ್ದು ಹೇಗೆ? ನೀವು ಟೋಲ್ ಏಕೆ ಟೈಟ್ ಮಾಡಿಲ್ಲ?: ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕ್ಲಾಸ್!

On: January 17, 2025 7:20 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:17-01-2025

ಮಂಗಳೂರು: ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು.

ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್ , ಡಿವೈಎಸ್ ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ ? ಎಷ್ಟು ಟೋಲ್ ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್ ಗಳನ್ನು‌ ಏಕೆ ಟೈಟ್ ಮಾಡಲಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದರು.

ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.‌

ಎಲ್ಲಾ ಟೋಲ್ ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment