SUDDIKSHANA KANNADA NEWS/ DAVANAGERE/ DATE:19-01-2025
ವಿಜಯಪುರ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಲು ಬಿ. ವೈ. ವಿಜಯೇಂದ್ರ ಯಡಿಯೂರಪ್ಪ ನಾಲಾಯಕ್ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬುಸುಗುಟ್ಟಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ನಾನು ಶಾಸಕ ರಮೇಶ್ ಜಾರಕಿಹೊಳಿ ಪರ ಇದ್ದೇನೆ. ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯಬೇಕು ಎಂದು ಒತ್ತಾಯಿಸಿದರು.
ಬಿ. ವೈ. ವಿಜಯೇಂದ್ರ ಅವರಿಂದಲೇ ಯಡಿಯೂರಪ್ಪ ಹಾಳಾಗಿದ್ದು. ಇದು ಎಲ್ಲರಿಗೂ ಗೊತ್ತು. ಯಡಿಯೂರಪ್ಪ ಪಕ್ಷ ಕಟ್ಟುವುದನ್ನು ಬಿಟ್ಟು ಮೊಮ್ಮಕ್ಕಳೊಂದಿಗೆ ಆಟವಾಡುತ್ತಾ ಇರಲಿ ಎಂದು ಸಲಹೆ ನೀಡಿದರು.
ವಿಜಯೇಂದ್ರ ಕೂಡಲೇ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯಬೇಕು. ನಾವು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಮರ್ಥ ಅಭ್ಯರ್ಥಿ ಕಣಕ್ಕಿಳಿಸುತ್ತೇನೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷನಾಗಲು ಒಪ್ಪಲು ಸಾಧ್ಯವಿಲ್ಲ. ರಮೇಶ್ ಜಾರಕಿಹೊಳಿ ಹೇಳಿರುವುದು ಸರಿಯಾಗಿಯೇ ಇದೆ ಎಂದು ಯತ್ನಾಳ್ ಗುಡುಗಿದರು.