Home ಉದ್ಯೋಗ ವಾರ್ತೆ KREIS ವಸತಿ ಶಾಲೆಗಳ 1087 ಶಿಕ್ಷಕರ ನೇಮಕಾತಿ: ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಆಗೆಸ್ಟ್ 17ಕ್ಕೆ ವಿಸ್ತರಣೆ!
ಉದ್ಯೋಗ ವಾರ್ತೆದಾವಣಗೆರೆಬೆಂಗಳೂರು

KREIS ವಸತಿ ಶಾಲೆಗಳ 1087 ಶಿಕ್ಷಕರ ನೇಮಕಾತಿ: ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಆಗೆಸ್ಟ್ 17ಕ್ಕೆ ವಿಸ್ತರಣೆ!

Share
ಶಿಕ್ಷಕ
Share

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕರ್ನಾಟಕ ವಸತಿ ಶೈಕ್ಷಣಿಕ ಸಂಸ್ಥೆಗಳ ಸಂಘದ (KREIS) ಅಡಿಯಲ್ಲಿ ಬರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಧಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿನ 1087 ಶಿಕ್ಷಕರ (Group-B & Group-C) ಹುದ್ದೆಗಳ ನೇಮಕಾತಿಯ ಆನ್‌ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಆಗೆಸ್ಟ್ 17, 2026 ರವರೆಗೆ ವಿಸ್ತರಿಸಿದೆ.

ಹುದ್ದೆಗಳ ವಿವರ:

ಒಟ್ಟು ಹುದ್ದೆಗಳು: 1087

ಉಳಿಕೆ ಕರ್ನಾಟಕ (RPC) ವೃಂದ: 767 ಹುದ್ದೆಗಳು

ಕಲ್ಯಾಣ ಕರ್ನಾಟಕ (KK) ವೃಂದ: 320 ಹುದ್ದೆಗಳು

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15 ಜುಲೈ 2026

ಅರ್ಜಿ ಸಲ್ಲಿಸಲು ವಿಸ್ತರಿಸಲಾದ ಕೊನೆಯ ದಿನಾಂಕ: 17 ಆಗಸ್ಟ್ 2026

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 18 ಆಗಸ್ಟ್ 2026

ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆ:

ಸಂಬಂಧಿಸಿದ ವಿಷಯದಲ್ಲಿ ಪದವಿ, B.Ed. ಪದವಿ ಹಾಗೂ KARTET / CTET (Paper-2) ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯನ್ನು ಸಂಪೂರ್ಣವಾಗಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯ (OMR ಆಧಾರಿತ) ಅಂಕಗಳ ಆಧಾರದ ಮೇಲೆ ನಡೆಸಲಾಗುತ್ತದೆ. ಯಾವುದೇ ಸಂದರ್ಶನ ಇರುವುದಿಲ್ಲ.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್ cetonline.karnataka.gov.in/kea ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Share

Leave a comment

Leave a Reply

Your email address will not be published. Required fields are marked *

Related Articles