ಬೀರ್ಭೂಮ್ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಿರಿಯ ನಾಯಕ ಅಸೀಶ್ ಬ್ಯಾನರ್ಜಿ ಅವರು ಬೀರ್ಭೂಮ್ ಜಿಲ್ಲೆಯ ರಾಂಪುರಹಾಟ್‌ನಲ್ಲಿರುವ ಪಾರ್ಟಿ ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಬ್ಯಾನರ್ಜಿ ಅವರು 2001 ರಿಂದ 25 ವರ್ಷಗಳ ಕಾಲ ರಾಂಪುರಹಾಟ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿ ಧ್ರುವ ಸಹಾ ಅವರ ವಿರುದ್ಧ ಸೋಲು ಕಂಡಿದ್ದರು.
ಘಟನಾ ಸ್ಥಳದಲ್ಲಿ ಡೆತ್ ನೋಟ್ ವಶಪಡಿಸಿಕೊಳ್ಳಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆಗೆ ದೇಹವನ್ನು ಕಳುಹಿಸಿದ್ದಾರೆ. ಸಾವಿಗೆ ನಿಖರವಾದ ಕಾರಣ ಏನು ಎಂಬ ಕುರಿತು ಪೊಲೀಸ್ ತನಿಖೆ ಮುಂದುವರಿದಿದೆ.





Leave a comment