Home ದಾವಣಗೆರೆ ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ಮಹತ್ವದ ಉಪಕ್ರಮ:  ಜಿಎಂ ವಿಶ್ವವಿದ್ಯಾಲಯದಲ್ಲಿ ಇಂದಿನಿಂದ ತರಬೇತಿ ಕಾರ್ಯಾಗಾರ
ದಾವಣಗೆರೆಉದ್ಯೋಗ ವಾರ್ತೆಬೆಂಗಳೂರು

ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ಮಹತ್ವದ ಉಪಕ್ರಮ:  ಜಿಎಂ ವಿಶ್ವವಿದ್ಯಾಲಯದಲ್ಲಿ ಇಂದಿನಿಂದ ತರಬೇತಿ ಕಾರ್ಯಾಗಾರ

Share
ಉದ್ಯೋಗಾವಕಾಶ
Share

ದಾವಣಗೆರೆ: ದೇಶದ ಸೆಮಿಕಂಡಕ್ಟರ್ ಮತ್ತು ಚಿಪ್ ವಿನ್ಯಾಸ ಕ್ಷೇತ್ರವನ್ನು ಬಲಪಡಿಸುವ ಹಾಗೂ ಯುವ ಇಂಜಿನಿಯರ್‌ಗಳಿಗೆ ಉದ್ಯಮಾಧಾರಿತ ಕೌಶಲ್ಯಗಳನ್ನು ಒದಗಿಸುವ ಉದ್ದೇಶದಿಂದ ಜಿಎಂ ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ (ECE) ವಿಭಾಗದ ವತಿಯಿಂದ “eChipHub Bootcamp” ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಜಿಎಂ ವಿಶ್ವವಿದ್ಯಾಲಯದ 3ನೇ ಹಾಗೂ ಅಂತಿಮ ವರ್ಷದ ECE ವಿದ್ಯಾರ್ಥಿಗಳಿಗಾಗಿ 90 ಗಂಟೆಗಳ ಅವಧಿಯಲ್ಲಿ ನಡೆಯಲಿರುವ ಈ ತರಬೇತಿ ಕಾರ್ಯಕ್ರಮವು ಸೆಮಿಕಂಡಕ್ಟರ್ ತಂತ್ರಜ್ಞಾನ, VLSI Design, RTL Design, IP Integration ಹಾಗೂ SoC Signoff ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳ ತಾಂತ್ರಿಕ ಜ್ಞಾನ ಮತ್ತು ಪ್ರಾಯೋಗಿಕ ಸಾಮರ್ಥ್ಯ ಹೆಚ್ಚಿಸುವುದನ್ನು ಪ್ರಮುಖ ಉದ್ದೇಶವಾಗಿ ಹೊಂದಿದೆ.

ಆಗಸ್ಟ್ 17ರಂದು ಜಿಎಂ ವಿಶ್ವವಿದ್ಯಾಲಯದಲ್ಲಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ತರಬೇತಿಯ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ VLSI Design, RTL Design, IP Integration, SoC Design ಹಾಗೂ SoC Signoff Process ಕುರಿತು ತಜ್ಞರಿಂದ ಪ್ರಾಯೋಗಿಕ ತರಬೇತಿ ನೀಡಲಾಗುತ್ತಿದೆ. Design Toolsಗಳ ಬಳಕೆ, Design Verification ಹಾಗೂ Chip Designನ ವಿವಿಧ ಹಂತಗಳ ಕುರಿತು hands-on ತರಬೇತಿಗೂ ಆದ್ಯತೆ ನೀಡಲಾಗಿದೆ.

ಕಾರ್ಯಕ್ರಮವನ್ನು NIELIT, Chitradurga, Karnataka ಸಂಸ್ಥೆಯ ಸಹಯೋಗದಲ್ಲಿ ಹಾಗೂ Ministry of Electronics and Information Technology (MeitY) ಯೋಜನೆಯಡಿ ಆಯೋಜಿಸಲಾಗಿದೆ. NIELIT, ಚಿತ್ರದುರ್ಗದ Academic Head ಎಸ್. ವಿಶ್ವನಾಥ್ ನಾಯಕ್ ಅವರು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ತರಬೇತಿ ನೀಡುತ್ತಿದ್ದಾರೆ.

ಈ ಕುರಿತು ಮಾತನಾಡಿದ ಜಿಎಂ ವಿಶ್ವವಿದ್ಯಾಲಯದ ECE ವಿಭಾಗದ ಮುಖ್ಯಸ್ಥರಾದ ಡಾ. ಪ್ರವೀಣ್ ಜೆ. ಅವರು, ಸೆಮಿಕಂಡಕ್ಟರ್ ಉದ್ಯಮದಲ್ಲಿ ವೇಗವಾಗಿ ಹೆಚ್ಚುತ್ತಿರುವ ಅವಕಾಶಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಉದ್ಯಮದ ಅಗತ್ಯಗಳಿಗೆ ಹೊಂದಿಕೊಳ್ಳುವ ಕೌಶಲ್ಯಗಳನ್ನು ನೀಡುವುದು ಈ ತರಬೇತಿಯ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

90 ಗಂಟೆಗಳ ತರಬೇತಿಯ ಮೂಲಕ ವಿದ್ಯಾರ್ಥಿಗಳು ಚಿಪ್ ವಿನ್ಯಾಸದ ವಿವಿಧ ಹಂತಗಳನ್ನು ಪ್ರಾಯೋಗಿಕವಾಗಿ ಅರಿತುಕೊಂಡು ತಮ್ಮ ವೃತ್ತಿಜೀವನಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದರು.

ಸೆಮಿಕಂಡಕ್ಟರ್ ಮತ್ತು VLSI ಕ್ಷೇತ್ರದಲ್ಲಿ ದೇಶದಲ್ಲಿ ಹೆಚ್ಚುತ್ತಿರುವ ಉದ್ಯೋಗಾವಕಾಶಗಳನ್ನು ಗಮನದಲ್ಲಿಟ್ಟುಕೊಂಡು, ಇಂತಹ ಉದ್ಯಮಾಧಾರಿತ ತರಬೇತಿಗಳು ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ಸಿದ್ಧಗೊಳಿಸುವುದರ ಜೊತೆಗೆ, ಉನ್ನತ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ನವೀನತೆ ಕೈಗೊಳ್ಳಲು ಸಹ ಪ್ರೇರೇಪಿಸಲಿವೆ.

ಈ ಕಾರ್ಯಕ್ರಮವು “Make in India” ಮತ್ತು “ಆತ್ಮನಿರ್ಭರ ಭಾರತ” ಪರಿಕಲ್ಪನೆಗಳಿಗೆ ಪೂರಕವಾಗಿ, ಭವಿಷ್ಯದ ಸೆಮಿಕಂಡಕ್ಟರ್ ಹಾಗೂ ಎಲೆಕ್ಟ್ರಾನಿಕ್ಸ್ ಕ್ಷೇತ್ರಕ್ಕೆ ಅಗತ್ಯವಿರುವ ನುರಿತ ಮಾನವ ಸಂಪನ್ಮೂಲವನ್ನು ರೂಪಿಸುವಲ್ಲಿ ಮಹತ್ವದ ಹೆಜ್ಜೆಯಾಗಲಿದೆ.

Share

Leave a comment

Leave a Reply

Your email address will not be published. Required fields are marked *