ನವದೆಹಲಿ:ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ರಾಷ್ಟ್ರೀಯ ವಕ್ತಾರ ಹಾಗೂ ಪ್ರಮುಖ ಮುಖಗಳಲ್ಲಿ ಒಬ್ಬರಾಗಿದ್ದ ಶಹಜಾದ್ ಪೂನಾವಾಲಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ವಕ್ತಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಅತ್ಯಂತ ತುರ್ತು ವೈಯಕ್ತಿಕ ಹಾಗೂ ಆರ್ಥಿಕ ಪರಿಸ್ಥಿತಿಗಳಿಂದಾಗಿ ತಾವು ಖಾಸಗಿ ವಲಯಕ್ಕೆ ಮರಳುತ್ತಿರುವುದಾಗಿ ತಿಳಿಸಿರುವ ಅವರು, ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರಿಗೆ ರವಾನಿಸಿದ್ದಾರೆ.
ಜುಲೈ 30 ರಂದೇ ಮೊದಲ ಬಾರಿಗೆ ರಾಜೀನಾಮೆ ಸಲ್ಲಿಸಿದ್ದಾಗ ಪಕ್ಷವು ಅದನ್ನು ತಿರಸ್ಕರಿಸಿ, ನಿರ್ಧಾರ ಮರುಪರಿಶೀಲಿಸುವಂತೆ ಕೋರಿತ್ತು. ಆದರೆ ಸುದೀರ್ಘ ಆಲೋಚನೆಯ ನಂತರ ತಮ್ಮ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
“ನಾನು ಪಕ್ಷದ ವ್ಯವಸ್ಥೆಯಿಂದ ಹೊರನಡೆಯುತ್ತಿದ್ದೇನೆ ಹೊರತು, ಪ್ರಧಾನಿ ನರೇಂದ್ರ ಮೋದಿ ಅವರ ವಿಚಾರಧಾರೆ ಅಥವಾ ಅವರ ಮೇಲಿನ ಗೌರವದಿಂದ ಅಲ್ಲ” ಎಂದು ಅವರು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.





Leave a comment