ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಎದುರಿಸುತ್ತಿರುವ ನಟ ದರ್ಶನ್ ತೂಗುದೀಪ ಅವರಿಗೆ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಆಘಾತ ನೀಡಿದೆ.
ಕೋರ್ಟ್ ಕಲಾಪಕ್ಕೆ ಖುದ್ದಾಗಿ ಹಾಜರಾಗಲು ಅನುಮತಿ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, ವಿಡಿಯೋ ಕಾನ್ಫರೆನ್ಸ್ (VC) ಮೂಲಕವೇ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಿಸಿದೆ.
ದರ್ಶನ್ ಪರ ವಕೀಲ ಹಷ್ಮತ್ ಪಾಷಾ ಅವರು ಸಾಕ್ಷಿಗಳ Cross-examinationಗೆ ಮುನ್ನ ದರ್ಶನ್ ಅವರನ್ನು ಭೌತಿಕವಾಗಿ ಹಾಜರುಪಡಿಸಲು ಕೋರಿದ್ದರು. ಆದರೆ, ನ್ಯಾಯಾಧೀಶರಾದ ಸುಜಾತಾ ಎಂ. ಸಂಭ್ರಾಣಿ ಅವರು ಈ ಮನವಿಯನ್ನು ತಿರಸ್ಕರಿಸಿದ್ದಾರೆ.
ಅದೇ ಸಮಯದಲ್ಲಿ, ಜೈಲಿನಲ್ಲಿರುವ ದರ್ಶನ್ ಮತ್ತು ಇತರ ಆರೋಪಿಗಳು ತಮ್ಮ ವಕೀಲರೊಂದಿಗೆ ರಹಸ್ಯವಾಗಿ ಮಾತುಕತೆ ನಡೆಸಿ ಸೂಕ್ತ ಕಾನೂನು ನೆರವು ಪಡೆಯಲು ಅವಕಾಶ ನೀಡುವಂತೆ ಬಂಧಿಖಾನೆ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ.
ಜೊತೆಗೆ, ವಿಡಿಯೋ ಕಾನ್ಫರೆನ್ಸ್‌ನಲ್ಲಿ ಯಾವುದೇ ತಾಂತ್ರಿಕ ಅಡಚಣೆ ಉಂಟಾಗದಂತೆ ನಗರ ಸಿವಿಲ್ ಕೋರ್ಟ್ ರಿಜಿಸ್ಟ್ರಾರ್ ಮೇಲ್ವಿಚಾರಣೆ ನಡೆಸಬೇಕೆಂದು ಆದೇಶಿಸಲಾಗಿದೆ.





Leave a comment