SUDDIKSHANA KANNADA NEWS/ DAVANAGERE/ DATE:26-01-2025
ದಾವಣಗೆರೆ: ನಗರದ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಶಿಕ್ಷಕ- ಶಿಕ್ಷಕಿಯರು ಸಂಭ್ರಮದಿಂದ 76ನೇ ಗಣರಾಜ್ಯೋತ್ಸವನ್ನು ಆಚರಿಸಿದರು.
ಹಿರಿಯ ಶಿಕ್ಷಕಿ ವೇದಾವತಿಯವರು ಧ್ವಜಾರೋಹಣ ಕಾರ್ಯ ನಡೆಸಿಕೊಟ್ಟರು. 7ನೇ ತರಗತಿ ಅನುಷಾ ಬಿ.ಪಿ ಮತ್ತು ಯು. ಕೆ. ಜಿ. ಯ ಅಥರ್ವ ಗಣರಾಜ್ಯೋತ್ಸವದ ಶುಭಾಷಯ ತಿಳಿಸಿ ಆಚರಣೆಯ ಮಹತ್ವವನ್ನು ವಿವರಿಸಿದರು.
ಸಂಗೀತ ಶಿಕ್ಷಕರಾದ ರುದ್ರಾಕ್ಷಿ ಬಾಯಿ ಮತ್ತು ಮಂಗಳ ಅವರ ನೇತೃತ್ವದಲ್ಲಿ ಮಕ್ಕಳು ಸುಶ್ರಾವ್ಯವಾಗಿ ದೇಶಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಿದರು. ವೇದಿಕೆಯಲ್ಲಿ ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯೆ ವಾಣಿಶ್ರೀ, ಸಿ. ಬಿ. ಎಸ್. ಇ. ಶಾಲೆಯ ಪ್ರಾಚಾರ್ಯೆ ಗಾಯತ್ರಿ ಚಿಮ್ಮಡ್, ಸಿದ್ಧಗಂಗಾ ಕಾಂಪೋಜಿಟ್ ಶಾಲೆಯ ಮುಖ್ಯ ಶಿಕ್ಷಕಿ ರೇಖಾರಾಣಿ ಕೆ. ಎಸ್. ಉಪಸ್ಥಿತರಿದ್ದರು.
ಕಾರ್ಯಕ್ರಮ ನಿರೂಪಣೆಯನ್ನು ಶಿಕ್ಷಕಿ ಆಶಾ ನಡೆಸಿಕೊಟ್ಟರು. ಸ್ವಾಗತ ಮತ್ತು ವಂದನಾರ್ಪಣೆಯನ್ನು ಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿʼಸೌಜ ನೆರವೇರಿಸಿದರು. ಸಂಸ್ಥೆಯ ಕಾರ್ಯದರ್ಶಿ ಡಿ. ಎಸ್. ಹೇಮಂತ್, ನಿರ್ದೇಶಕ ಡಾ|| ಡಿ. ಎಸ್. ಜಯಂತ್ ರವರು ಮತ್ತು ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರು.