ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯ ಗುಟ್ಟೆ ಬಸವೇಶ್ವರ ನಗರದಲ್ಲಿ ಆಘಾತಕಾರಿ ಘಟನೆ ನಡೆದಿದೆ.
34 ವರ್ಷದ ಅಭಿನಂದನ್ ಹಾಗೂ ಅವರ 4 ವರ್ಷದ ಮಗ ಯದುವೀರ್ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದರು.
ಪೋಲಿಸರ ಪ್ರಾಥಮಿಕ ತನಿಖೆಯಲ್ಲಿ ಅಭಿನಂದನ್ ಅವರ ಪತ್ನಿ ಹರಿಣಿ ತನ್ನ ಪ್ರಿಯಕರ ವಿನಯ್ ಜೊತೆ ಸೇರಿ ಈ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.
ಘಟನೆಯ ದಿನ ದಂಪತಿಗಳ ನಡುವೆ ಜಗಳವಾಗಿದ್ದು, ಹರಿಣಿ ಅಭಿನಂದನ್ ಅವರ ಮೇಲೆ ಹಲ್ಲೆ ನಡೆಸಿದ್ದಳು. ನಂತರ ಪ್ರಿಯಕರ ವಿನಯ್ನನ್ನು ಮನೆಗೆ ಕರೆಸಿಕೊಂಡು ಪತಿಯನ್ನು ಉಸಿರುಗಟ್ಟಿಸಿ ಕೊಂದಿದ್ದಾರೆ. ಈ ವೇಳೆ ಎಚ್ಚರಗೊಂಡ ಮಗ ಯದುವೀರ್ನನ್ನು ಸಹ ದಿಂಬಿನಿಂದ ಮುಚ್ಚಿ ಕೊಲೆ ಮಾಡಿದ್ದಾರೆ.
ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡಿ ಸಾಕ್ಷ್ಯ ನಾಶಪಡಿಸಲು ಯತ್ನಿಸಲಾಗಿದೆ. ಪೊಲೀಸರು ಹರಿಣಿಯನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ವಿನಯ್ಗಾಗಿ ಶೋಧ ನಡೆಸುತ್ತಿದ್ದಾರೆ.





Leave a comment