SUDDIKSHANA KANNADA NEWS/ DAVANAGERE/ DATE:26-01-2025
ದಾವಣಗೆರೆ: ವಿಶ್ವವಾಣಿ ಪತ್ರಿಕೆಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರತಿವರ್ಷ “ಗ್ಲೋಬಲ್ ಅಚೀವರ್ಸ್ ಅವಾರ್ಡ್” ನೀಡಲಾಗುತ್ತಿದ್ದು, ಈ ಬಾರಿ ದಾವಣಗೆರೆ ವಾಣಿಜ್ಯೋದ್ಯಮಿ, ಬಿಜೆಪಿ ಯುವ ಮುಖಂಡ ಜಿ.ಎಸ್. ಅನಿತ್ಕುಮಾರ್ ಆಯ್ಕೆಯಾಗಿದ್ದಾರೆ.
ಓಮನ್ ರಾಜಧಾನಿ ಮಸ್ಕತ್ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅನಿತ್ಕುಮಾರ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ರಾಜಕೀಯವಾಗಿ ತಾತಾ ದಿ. ಜಿ. ಮಲ್ಲಿಕಾರ್ಜುನಪ್ಪ, ತಂದೆ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಗರಡಿಯಲ್ಲಿ ಪಳಗಿರುವ ಅನಿತ್ಕುಮಾರ್ ಬಿಜೆಪಿಯ ಭರವಸೆಯ ನಾಯಕರು.
ಸಮಾಜ ಸೇವಕರಾಗಿ, ಬಿಜೆಪಿ ಯುವ ಮುಖಂಡರಾಗಿ, ಯಶಸ್ವಿ ಉದ್ಯಮಿಯಾಗಿ ಹಲವಾರು ಕ್ಷೇತ್ರಗಳಲ್ಲಿ ಪ್ರತಿನಿಧಿಸುತ್ತ ಸಾಮಾಜಿಕ ಕಾರ್ಯ ಮಾಡುತ್ತಾ ಬಡವರ ಹಿಂದುಳಿದವರ ಶೋಷಿತರ ಪರವಾಗಿ ಆರೋಗ್ಯ, ಶಿಕ್ಷಣ, ಉದ್ಯೋಗ, ಕ್ಷೇತ್ರದಲ್ಲಿ
ಸಮಾಜ ಸೇವೆ ಮಾಡುತ್ತಾ ಬರುತ್ತಿದ್ದಾರೆ. ಜಿ.ಮಲ್ಲಿಕಾರ್ಜುನಪ್ಪ ಶ್ರೀಮತಿ ಹಾಲಮ್ಮ ಚಾರಿಟಿ ಫೌಂಡೇಶನ್ನ ಮೂಲಕ ಹಲವಾರು ಸಾಮಾಜಿಕ ಕಾರ್ಯ ಮಾಡುತ್ತಾ ಬಂದಿದ್ದಾರೆ.
ಕೋವಿಡ್ ಸಂಕಷ್ಟದ ಸಮಯದಲ್ಲಿ ಮೂರು ಜಿಲ್ಲೆಗಳಾದ ಚಿತ್ರದುರ್ಗ, ದಾವಣಗೆರೆ ಜಿಲ್ಲೆಯ ಹರಿಹರ, ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕು ಆಸ್ಪತ್ರೆಗೆ 1.89 ಕೋಟಿ ರೂ. ಮೊತ್ತದ ಆಕ್ಸಿಜನ್ ಪ್ಲಾಂಟ್, ಬಡವರಿಗೆ ತಮ್ಮ ಟ್ರಸ್ಟ್ ಮೂಲಕ ಸಾವಿರಾರು ಉಚಿತ ರೇಷನ್ ಕಿಟ್, ಲಕ್ಷಾಂತರ ಫೇಸ್ ಮಾಸ್ಕ್ ಮತ್ತು ಸಾನಿಟೈಸರ್ ಬಾಟಲ್ ನೀಡಿ ಕೋವಿಡ್ ಸಂಕಷ್ಟದಿಂದ ಜನರನ್ನು ಪಾರು ಮಾಡಿದವರು.
ಜಿಎಂ ಗ್ರೂಪ್ ನಿರ್ದೇಶಕರಾಗಿ, ಭೀಮಸಮುದ್ರದ ಶ್ರೀಶೈಲ ಎಜುಕೇಷನ್ ಟ್ರಸ್ಟ್ ಖಜಾಂಜಿಯಾಗಿ, ಜಿ. ಮಲ್ಲಿಕಾರ್ಜುನಪ್ಪ, ಶ್ರೀಮತಿ ಹಾಲಮ್ಮ ಚಾರಿಟಿ ಫೌಂಡೇಷನ್ ಟ್ರಸ್ಟಿಯಾಗಿ, ಭೀಮಸಮುದ್ರ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಅವರ ಸೇವೆ
ಸಲ್ಲಿಸುತ್ತಿದ್ದಾರೆ.