Home ಕ್ರೈಂ ನ್ಯೂಸ್ BIG NEWS: ಪಾಕಿಸ್ತಾನ ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ಜೈಲಿನಿಂದ ಆಸ್ಪತ್ರೆಗೆ ಇಮ್ರಾನ್ ಖಾನ್ ವರ್ಗಾವಣೆ!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

BIG NEWS: ಪಾಕಿಸ್ತಾನ ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ಜೈಲಿನಿಂದ ಆಸ್ಪತ್ರೆಗೆ ಇಮ್ರಾನ್ ಖಾನ್ ವರ್ಗಾವಣೆ!

Share
ಇಮ್ರಾನ್ ಖಾನ್
Share

ಇಸ್ಲಾಮಾಬಾದ್: ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ತಕ್ಷಣವೇ ರಾವಲ್ಪಿಂಡಿಯ ಅಡಿಯಾಲ ಜೈಲಿನಿಂದ ಆಸ್ಪತ್ರೆಗೆ ರವಾನಿಸುವಂತೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.

ಕಳೆದ ಕೆಲವು ದಿನಗಳಿಂದ ಇಮ್ರಾನ್ ಖಾನ್ ಅವರ ಕಣ್ಣಿನ ದೃಷ್ಟಿ ಸಮಸ್ಯೆ ಹಾಗೂ ಅಧಿಕ ರಕ್ತದೊತ್ತಡ ಸೇರಿದಂತೆ ತೀವ್ರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅವರ ಪಕ್ಷವಾದ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ತ್ರಿಪೀಠದ ಪೀಠ, ಇಮ್ರಾನ್ ಖಾನ್ ಅವರಿಗೆ ಇಸ್ಲಾಮಾಬಾದ್‌ನ ಶಿಫಾ ಇಂಟರ್ನ್ಯಾಷನಲ್ ಆಸ್ಪತ್ರೆಯಲ್ಲಿ ಸೂಕ್ತ ಹಾಗೂ ಕಣ್ಣಿನ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವಂತೆ ನಿರ್ದೇಶನ ನೀಡಿದೆ.

ಅಲ್ಲದೆ, ಸೂಕ್ತ ಭದ್ರತೆಯೊಂದಿಗೆ ಚಿಕಿತ್ಸೆ ನೀಡಲು ಮತ್ತು ಅವರ ಪೂರ್ಣ ವೈದ್ಯಕೀಯ ವರದಿಯನ್ನು ಕೋರ್ಟ್‌ಗೆ ಸಲ್ಲಿಸಲು ಜೈಲು ಆಡಳಿತಕ್ಕೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದೆ.

Share

Leave a comment

Leave a Reply

Your email address will not be published. Required fields are marked *