ಬೆಂಗಳೂರು: “ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ” ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.
ಕಳ್ಳಬೇಟೆ ನಿಗ್ರಹ ಶಿಬಿರಗಳನ್ನು ಜಿಲೆಟಿನ್ ಬಳಸಿ ಸ್ಪೋಟಿಸಲಾಗಿದ್ದು, ತಮಿಳುನಾಡು ಮೂಲದ ಕಳ್ಳರ ಕೈವಾಡದ ಶಂಕೆಯಿದೆಯೇ ಎಂದು ಕೇಳಿದಾಗ, “ನನಗೂ ಕೆಲವು ಮಾಹಿತಿ ಬರುತ್ತಿದೆ. ಅರಣ್ಯ ಸಚಿವರು ತನಿಖೆ ಮಾಡಿಸುತ್ತಿದ್ದಾರೆ. ಈಗ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ವರದಿ ಬಂದ ಬಳಿಕ ಮಾಹಿತಿ ನೀಡುತ್ತೇವೆ” ಎಂದರು.
ತಮಿಳುನಾಡು ಮೂಲದ ಕಳ್ಳರ ಕೈವಾಡವಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, “ಅರಣ್ಯ ಸಚಿವರು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈಗಲೇ ಯಾವುದೇ ಆತುರದ ಪ್ರತಿಕ್ರಿಯೆ ನೀಡುವುದಿಲ್ಲ. ಪೂರ್ಣ ವರದಿ ಕೈಸೇರಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಸ್ಪಷ್ಟಪಡಿಸಿದರು.





Leave a comment