ಮುಂಬೈ/ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಸಂಘಟನೆಯ ‘ಸ್ಕೂಲ್ ಠೀಕ್ ಕರೋ’ (ಶಾಲೆಯನ್ನು ಸರಿಪಡಿಸಿ) ಅಭಿಯಾನಕ್ಕೆ ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತೊಮ್ಮೆ ಬಹಿರಂಗ ಬೆಂಬಲ ಸೂಚಿಸಿದ್ದಾರೆ.
ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಕುಡುಕ ಮುಖ್ಯೋಪಾಧ್ಯಾಯನನ್ನು ಅಮಾನತುಗೊಳಿಸುವಲ್ಲಿ ಯಶಸ್ವಿಯಾದ ಗ್ರಾಮಸ್ಥರು ಮತ್ತು CJP ಹೋರಾಟವನ್ನು ನಟ ಕೊಂಡಾಡಿದ್ದಾರೆ.
CJP ಸಂಸ್ಥಾಪಕ ಅಭೀಜಿತ್ ದೀಪ್ಕೆ ಶೇರ್ ಮಾಡಿದ ವಿಡಿಯೋವನ್ನು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡಿರುವ ಪ್ರಕಾಶ್ ರಾಜ್, “ಸಂಸ್ಥೆಗಳಿಂದ ಜವಾಬ್ದಾರಿಯನ್ನು ಪ್ರಶ್ನಿಸುವ ನಾಗರಿಕರ ಶಕ್ತಿ ಇದು. ದಿಮಾಗಿ ಬನೋ.. ಅಂಧಭಕ್ತರಾಗಬೇಡಿ” ಎಂದು ಬರೆದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿನ ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಬಳಸಿದ್ದ ‘ದಿಮಾಗಿ ನಕ್ಸಲ್’ ಪದಕ್ಕೆ ಪ್ರಕಾಶ್ ರಾಜ್ ಈ ಮೂಲಕ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ ಎನ್ನಲಾಗಿದೆ.
ಈ ಹಿಂದೆ NEET ಪರೀಕ್ಷಾ ಅಕ್ರಮ ಹಾಗೂ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟ ವಿಚಾರದಲ್ಲೂ ಪ್ರಕಾಶ್ ರಾಜ್ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದರು.





Leave a comment