ದಾವಣಗೆರೆ: ನಗರದ 66/11ಕೆವಿ ಮೆಳ್ಳಿಕಟ್ಟೆ ಹಾಗೂ 66/11ಕೆವಿ ಕಾಡಜ್ಜಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 24 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಆಲೂರು, ಬಿ.ಜೆ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ, ರೆಡ್ಡಿ ಕ್ಯಾಂಪ್, ಪುಟಗಾನಾಳು, ಶ್ರೀರಾಮನಗರ, ಕಾಡಜ್ಜಿ, ಬಸವನಾಳು, ನಾಗರಕಟ್ಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ಗ್ರಾಹಕರು ಸೂಕ್ತ ಮುನ್ನೆಚ್ಚರಿಕೆ ವಹಿಸಿ ಬೆಸ್ಕಾಂ (BESCOM) ಸಿಬ್ಬಂದಿಯೊಂದಿಗೆ ಸಹಕರಿಸಬೇಕಾಗಿ ಪ್ರಕಟಣೆಯಲ್ಲಿ ಕೋರಲಾಗಿದೆ.





Leave a comment