Home ದಾವಣಗೆರೆ ಪಿಎಂ ಕಿಸಾನ್ ಮುಂದಿನ ಕಂತಿಗೆ ಇ-ಕೆವೈಸಿ ಕಡ್ಡಾಯ, ಇಲ್ಲದಿದ್ದರೆ ಬರಲ್ಲ ಹಣ: ದಾವಣಗೆರೆ ಜಿಲ್ಲೆಯ 1.30 ಲಕ್ಷ ರೈತರ e-KYC ಇನ್ನೂ ಬಾಕಿ!
ದಾವಣಗೆರೆನವದೆಹಲಿಬೆಂಗಳೂರು

ಪಿಎಂ ಕಿಸಾನ್ ಮುಂದಿನ ಕಂತಿಗೆ ಇ-ಕೆವೈಸಿ ಕಡ್ಡಾಯ, ಇಲ್ಲದಿದ್ದರೆ ಬರಲ್ಲ ಹಣ: ದಾವಣಗೆರೆ ಜಿಲ್ಲೆಯ 1.30 ಲಕ್ಷ ರೈತರ e-KYC ಇನ್ನೂ ಬಾಕಿ!

Share
ದಾವಣಗೆರೆ
Share

ದಾವಣಗೆರೆ: ಜಿಲ್ಲೆಯ ಪಿ.ಎಂ. ಕಿಸಾನ್ ಯೋಜನೆಯ ಅರ್ಹ ಫಲಾನುಭವಿ ರೈತರು ಮುಂದಿನ ಕಂತಿನ ನೆರವು ಪಡೆಯಲು ಬಯೋಮೆಟ್ರಿಕ್ ಅಥವಾ ಮುಖ ದೃಢೀಕರಣ ಆಧಾರಿತ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.

ಪಿ.ಎಂ. ಕಿಸಾನ್ ಯೋಜನೆಯಲ್ಲಿ ನಕಲಿ ಫಲಾನುಭವಿಗಳನ್ನು ತಡೆಯಲು, ಮೃತರನ್ನು ಪಟ್ಟಿಯಿಂದ ಕೈಬಿಟ್ಟು, ಅರ್ಹ ರೈತರಿಗೆ ಪಾರದರ್ಶಕವಾಗಿ ಹಣ ಜಮೆ ಮಾಡಲು ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ಪ್ರತಿಯೊಬ್ಬ ರೈತರಿಗೆ ಆರ್ಥಿಕ ನೆರವಿನ ಭಾಗವಾಗಿ ವಾರ್ಷಿಕ ರೂ. 6,000 ಹಣವನ್ನು ಮೂರು ಕಂತುಗಳಲ್ಲಿ (ಪ್ರತಿ 4 ತಿಂಗಳಿಗೊಮ್ಮೆ ರೂ. 2,000 ರಂತೆ ನೇರ ನಗದು ವರ್ಗಾವಣೆ ಮೂಲಕ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ.

ಆಧಾರ್ ಒಟಿಪಿ ಆಧಾರಿತ ಇ-ಕೆವೈಸಿಯಿಂದಾಗಿ ಮೃತಪಟ್ಟವರ ಖಾತೆಗಳಿಗೂ ಹಣ ವರ್ಗಾವಣೆಯಾಗುತ್ತಿದ್ದ ಪ್ರಕರಣಗಳು ಬೆಳಕಿಗೆ ಬಂದಿದ್ದರಿಂದ, ಕೇಂದ್ರ ಸರ್ಕಾರವು ಒಟಿಪಿ ವ್ಯವಸ್ಥೆಯನ್ನು ರದ್ದುಗೊಳಿಸಿದ್ದು, ಕೇವಲ ಬಯೋಮೆಟ್ರಿಕ್ ಅಥವಾ ಫೇಸ್ ಆಧಾರಿತ ಇ- ಕೆವೈಸಿಗೆ ಮಾತ್ರ ಅವಕಾಶ ನೀಡಿದೆ. ಪ್ರತಿಯೊಬ್ಬ ಫಲಾನುಭವಿಯೂ ಬ್ಯಾಂಕ್ ಖಾತೆಗೆ ಆಧಾರ್ ಹಾಗೂ ಲಿಂಕ್ ಮಾಡಿಸಿದ್ದರೂ ಸಹ ಈ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ.

ಜಿಲ್ಲೆಯಲ್ಲಿ ಒಟ್ಟು 130653 ರೈತರ ಇ-ಕೆವೈಸಿ ಬಾಕಿ ಇದೆ. ತಾಲ್ಲೂಕುವಾರು ಚನ್ನಗಿರಿ 36390, ದಾವಣಗೆರೆ 29778, ಹರಿಹರ – 16681, ಹೊನ್ನಾಳಿ – 17052, ಜಗಳೂರು – 19630 ಮತ್ತು ನ್ಯಾಮತಿ – 2533 ರೈತರ ಇ-ಕೆ.ವೈಸಿ ಮಾಡಿಸಬೇಕಾಗಿರುತ್ತದೆ.
ಇ-ಕೆವೈಸಿ ಪೂರ್ಣಗೊಳಿಸಲು ವಿಧಾನಗಳು: ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ: ರೈತರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ನೀಡುವುದರ ಮೂಲಕ ಇ-ಕೆವೈಸಿ ಮಾಡಿಸಬಹುದು.

ಮುಖ (ಫೇಸ್) ದೃಢೀಕರಣ ಆಧಾರಿತ ಇ-ಕೆವೈಸಿ: & ಪಿ.ಎಂ ಕಿಸಾನ್ ಮೊಬೈಲ್ ಅಪ್ಲಿಕೇಶನ್ ಡೌನ್‍ಲೋಡ್ ಮಾಡಿಕೊಂಡು, ಸ್ಮಾರ್ಟ್ ಫೋನ್ ಮೂಲಕ ಮುಖ ದೃಢೀಕರಣ ಮಾಡಿ ಸ್ವತಃ ಇ-ಕೆವೈಸಿ ಪೂರ್ಣಗೊಳಿಸಬಹುದು. ಇದು ಬೆರಳಚ್ಚು ನೀಡಲು ಸಾಧ್ಯವಾಗದ ಹಿರಿಯರಿಗೆ ಹಾಗೂ ಇತರರಿಗೆ ನೆರವಾಗಲಿದೆ. ಜಿಲ್ಲೆಯ ಎಲ್ಲಾ ಫಲಾನುಭವಿ ರೈತರು ತಕ್ಷಣವೇ ಇ-ಕೆವೈಸಿ ಪೂರ್ಣಗೊಳಿಸಿ ಯೋಜನೆಯ ಸೌಲಭ್ಯವನ್ನು ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಸಂಪರ್ಕಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *